ದಾವಣಗೆರೆ: ಟಿಕ್ಟಾಕ್ನಲ್ಲಿ ವಿಡಿಯೋ ಮಾಡುತ್ತಲೇ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಾಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಗರಾಜು ನೇಣು ಬಿಗಿದುಕೊಂಡು ಸಾವನ್ನಪ್ಪಿದ ವ್ಯಕ್ತಿ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣು ಹಾಕಿಕೊಳ್ಳುತ್ತಿರುವ ವಿಡಿಯೋ ಪೋಸ್ಟ್ ಮಾಡಿ ನಂತರ ಸಾವನ್ನಪ್ಪಿದ್ದಾನೆ. ಈತನ ಹುಚ್ಚಾಟಕ್ಕೆ ಮೂವರು ಹೆಣ್ಣು ಮಕ್ಕಳು ಅನಾಥರಾಗಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.