ETV Bharat / state

ದಾವಣಗೆರೆ: ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ವ್ಯಕ್ತಿ ಮೇಲೆ ಮನೆ ಕುಸಿದು ಸಾವು - ನರಗನಹಳ್ಳಿ ಗ್ರಾಮದಲ್ಲಿ ಮನೆ ಕುಸಿತ

ಮನೆ ಕುಸಿದ ತಕ್ಷಣವೇ ತೀವ್ರವಾಗಿ ಗಾಯಗೊಂಡ ಮಂಜುನಾಥ ಅವರನ್ನು ಆಸ್ಪತ್ರೆಗೆ ಕರೆ ತರುವಷ್ಟರಲ್ಲಿ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

manjunatha
ಮಂಜುನಾಥ (48)
author img

By

Published : Oct 7, 2021, 10:51 PM IST

ದಾವಣಗೆರೆ: ತಾಲೂಕಿನ ನರಗನಹಳ್ಳಿ ಗ್ರಾಮದಲ್ಲಿ ಮಧ್ಯಾಹ್ನದ ಊಟ ಮುಗಿಸಿ ವಿಶ್ರಾಂತಿ ಪಡೆಯುತ್ತ ಕುಳಿತ್ತಿದ್ದ ವ್ಯಕ್ತಿ ಮೇಲೆ ಮನೆ ಕುಸಿದಿದೆ. ಪರಿಣಾಮ ಆ ವ್ಯಕ್ತಿ ಅಲ್ಲಿಯೇ ಮೃತಪಟ್ಟಿದ್ದಾರೆ.

ಮಂಜುನಾಥ (48) ಮನೆ ಕುಸಿದು ಮೃತಪಟ್ಟ ವ್ಯಕ್ತಿ. ಗಾಯಾಳುಗೆ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಕಳೆದ ಎರಡು ದಿನಗಳಿಂದ ಮಳೆ ಸುರಿದ ಪರಿಣಾಮ ಈ ಅವಾಂತರವಾಗಿದೆ.

ಮನೆ ಕುಸಿದ ತಕ್ಷಣವೇ ತೀವ್ರವಾಗಿ ಗಾಯಗೊಂಡ ಮಂಜುನಾಥ ಅವರನ್ನು ಆಸ್ಪತ್ರೆಗೆ ಕರೆ ತರುವಷ್ಟರಲ್ಲಿ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಓದಿ: 'ಹೆಚ್​ಡಿಕೆ - ಸಿದ್ದರಾಮಯ್ಯಗೆ ಆರ್​ಎಸ್​ಎಸ್​ ಬಗ್ಗೆ ಟೀಕೆ ಮಾಡಿಲ್ಲ ಎಂದರೆ ತಿಂದಿರುವ ಅನ್ನ ಕರಗುವುದಿಲ್ಲ'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.