ETV Bharat / state

ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ.. ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ

2019ರಲ್ಲಿ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ - ಆರೋಪ ಸಾಬೀತು- ತಪ್ಪಿತಸ್ಥನಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 1,37,000 ಸಾವಿರ ರೂ. ದಂಡ ವಿಧಿಸಿದ ಕೋರ್ಟ್​

Representative image
ಸಾಂದರ್ಭಿಕ ಚಿತ್ರ
author img

By

Published : Jan 11, 2023, 6:01 PM IST

ದಾವಣಗೆರೆ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಇಲ್ಲಿನ ವಿಶೇಷ ಪೋಕ್ಸೋ ನ್ಯಾಯಾಲಯ 10 ವರ್ಷಗಳ ಕಾಲ ಕಠಿಣ ಶಿಕ್ಷೆ ಹಾಗೂ 1,37,000 ರೂ.ದಂಡ ವಿಧಿಸಿ ತೀರ್ಪು ನೀಡಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದ ಹಾಲೇಶ್ ಅಲಿಯಾಸ್ ಹಾಲಸ್ವಾಮಿ (25) ಶಿಕ್ಷೆಗೆ ಒಳಗಾದ ಅಪರಾಧಿ. ಹಾಲೇಶ್ ಕಳೆದ 2019ರಲ್ಲಿ 17 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ಪುಸಲಾಯಿಸಿ ಅಪಹರಿಸಿದ್ದ. ಮದುವೆ ಆಗುವುದಾಗಿ ನಂಬಿಸಿ ತೀರ್ಥಹಳ್ಳಿಗೆ ತೆರಳಿ, ಬಳಿಕ ಅಲ್ಲಿಂದ ಉಡುಪಿ ಸಮೀಪದ ಸಾಲಿಗ್ರಾಮದ ತನ್ನ ಸ್ನೇಹಿತನ ಮನೆಗೆ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ತಿಳಿದ ಬಾಲಕಿ ಕುಟುಂಬಸ್ಥರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಅಂದಿನ ತನಿಖಾಧಿಕಾರಿ ಬ್ರಿಜೇಷ್ ಮೆಹತಾ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಅತ್ಯಾಚಾರದ ಆರೋಪ ಸಾಬೀತಾಗಿದೆ. ಜಿಲ್ಲಾ ಮತ್ತು ಸೆಷನ್ಸ್ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಎನ್. ಶ್ರೀಪಾದ್ ಅವರು, ತೀರ್ಪು ಪ್ರಕಟಿಸಿದರು. ಸಂತ್ರಸ್ತೆಗೆ ಪರಿಹಾರ ರೂಪದಲ್ಲಿ 4.50 ಲಕ್ಷ ಕೊಡಿಸುವಂತೆ ಜಿಲ್ಲಾ ಉಚಿತ ಸೇವಾ ಪ್ರಾಧಿಕಾರ ಆದೇಶಿಸಿದೆ. ಸರ್ಕಾರದ ಪರವಾಗಿ ಪೋಕ್ಸೋ ನ್ಯಾಯಾಲಯದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ರೇಖಾ ಎಸ್. ಕೋಟೆಗೌಡರ್ ವಾದ ಮಂಡಿಸಿ ಅಪ್ರಾಪ್ತ ಬಾಲಕಿಗೆ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ

ವಿವಾಹಿತೆಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ: ಮತ್ತೊಂದೆಡೆ ಆಂದ್ರಪ್ರದೇಶದಲ್ಲಿ ವ್ಯಕ್ತಿಯೊಬ್ಬ ವಿವಾಹಿತ ಮಹಿಳೆಯೊಬ್ಬರನ್ನು ಒಂದು ತಿಂಗಳ ಕಾಲ ಗೃಹ ಬಂಧನದಲ್ಲಿಟ್ಟು, ಎರಡು ಪ್ರದೇಶಗಳಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ದಲಿತ ಸಮುದಾಯಗಳ ಮುಖಂಡರು ಆರೋಪಿಸಿದ್ದಾರೆ. ತಿರುಪತಿ ಜಿಲ್ಲೆಯ ಚಂದ್ರಗಿರಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತೂರು ಜಿಲ್ಲೆ ವೆದುರುಕುಪ್ಪಂ ಮಂಡಲದ ಗಂಗಾಧರನೆಲ್ಲೂರು ಕ್ಷೇತ್ರದ ಬಲಿಜಪಲ್ಲಿಯ ವಿವಾಹಿತ ಮಹಿಳೆ ತಿರುಪತಿಯ ಖಾಸಗಿ ಶಾಲೆಯೊಂದರಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದರು.

'ಬಲಿಜಪಲ್ಲಿ ಮೂಲದ ವ್ಯಕ್ತಿಯೊಬ್ಬ ಕಳೆದ ವರ್ಷ ನವೆಂಬರ್ 17 ರಂದು ವಿವಾಹಿತ ಮಹಿಳೆ ಕೆಲಸ ಮಾಡುತ್ತಿದ್ದ ಶಾಲೆಗೆ ಹೋಗಿದ್ದ. ನಂತರ ಆತ ತನ್ನೊಂದಿಗೆ ಬಂದು ಬ್ಯಾಂಕ್ ಸಾಲ ತೆಗೆದುಕೊಳ್ಳುವಂತೆ ಮಹಿಳೆಗೆ ಬಲವಂತ ಮಾಡಿದ್ದ. ಆಕೆ ನಿರಾಕರಿಸಿ ಪ್ರತಿರೋಧ ವ್ಯಕ್ತಪಡಿಸಿದಾಗ ಶಾಲೆಯ ಆವರಣದಲ್ಲಿಯೇ ಬೆದರಿಸಿ ಥಳಿಸಿ ಬಲವಂತವಾಗಿ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗಿದ್ದ. ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಕೊಠಡಿಯೊಂದರಲ್ಲಿ ಕೂಡಿ ಹಾಕಿ ಅತ್ಯಾಚಾರವೆಸಗಿದ್ದಾನೆ. ಬಳಿಕ ದುಷ್ಕರ್ಮಿಯು ಆಕೆಯನ್ನು ಆಕೆಯ ತವರು ಮನೆಗೆ ಬಿಟ್ಟು ಪರಾರಿಯಾಗಿದ್ದಾನೆ. ಘಟನೆಯಿಂದ ಆಘಾತಕ್ಕೊಳಗಾದ ಸಂತ್ರಸ್ತ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಆದರೆ ಆಕೆಯ ಕುಟುಂಬಸ್ಥರು ಅವಳ ಜೀವ ಕಾಪಾಡಿದ್ದಾರೆ. ಗ್ರಾಮದ ಹಿರಿಯರು ಮತ್ತು ಕುಟುಂಬದ ಸದಸ್ಯರು ಸಹಕಾರ ನೀಡದಿದ್ದರೂ ತಾವು ಈ ವರ್ಷ ಜನವರಿ 6 ರಂದು ತಿರುಪತಿ ಜಿಲ್ಲಾ ಎಸ್ಪಿ ಮತ್ತು ದಿಶಾ ಪೊಲೀಸ್ ಠಾಣೆ ಡಿಎಸ್ಪಿ ರಾಮರಾಜು ಅವರಿಗೆ ದೂರು ಸಲ್ಲಿಸಿದ್ದೇವೆ' ಎಂದು ದಲಿತ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ: ವಿವಾಹಿತೆಯನ್ನು ಕಿಡ್ನ್ಯಾಪ್ ಮಾಡಿ ರೇಪ್; ಚಂದ್ರಗಿರಿಯಲ್ಲಿ ಬೆಚ್ಚಿಬೀಳಿಸುವ ಘಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.