ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬ ಕೊರೊನಾ ಸೋಂಕು ತಗುಲುವ ಭೀತಿ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಸವಾಪುರ ನಿವಾಸಿ ಮಂಜುನಾಥ್ ಎಂಬಾತನೇ ಮೃತ ವ್ಯಕ್ತಿ. ಕಳೆದ 20 ರಂದು ಈತನನ್ನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆನೆಕೊಂಡದ ವ್ಯಕ್ತಿಯೊಬ್ಬನಲ್ಲಿ ಕೊರೊನಾ ಸೋಂಕು ಇದ್ದುದು ದೃಢಪಟ್ಟ ಹಿನ್ನೆಲೆ ಆತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಂಜುನಾಥ್ನನ್ನು ಗಂಟಲು ದ್ರವ ಪರೀಕ್ಷೆಗೆಂದು ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು.
ನಂತರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಆದ್ರೆ, ಇಂದು ಬೆಳಗ್ಗೆ ಮಂಜುನಾಥ್ ತನ್ನನ್ನು ಸಹ ಕ್ವಾರಂಟೈನ್ ಮಾಡುತ್ತಾರೆಂದು ಹೆದರಿ ಬಾತ್ ರೂಂಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.