ETV Bharat / state

ಅಕ್ರಮ ಗಾಂಜಾ ಮಾರಾಟ: 960 ಗ್ರಾಂ ಗಾಂಜಾ ಸೀಜ್​, ಇಬ್ಬರು ಯುವಕರ ಬಂಧನ - marijuana illigal sellers arrested

ದಾವಣಗೆರೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದು, 960 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

marijuana dealer arrests in davanagere
ಇಬ್ಬರು ಯುವಕರ ಬಂಧನ
author img

By

Published : Feb 6, 2021, 1:31 PM IST

ದಾವಣಗೆರೆ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ಸಿಇಎನ್ ಠಾಣೆಯ ಪೊಲೀಸರಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ ಸಂತೋಷ್(25), ಸಂಜಯ್ (25) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ಇರುವ ಕ್ಯಾನ್ಸರ್ ಆಸ್ಪತ್ರೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಪೊಲೀಸರು, 45,ಸಾವಿರ ಮೌಲ್ಯದ 960 ಗ್ರಾಂ ಗಾಂಜಾ, ಒಂದು ರಾಯಲ್ ಎನ್​ಫೀಲ್ಡ್ ಬೈಕ್ ವಶಕ್ಕೆ ಪಡೆದಿದ್ದಾರೆ. ಈ ಖದೀಮರು ಗಾಂಜಾವನ್ನು ಎಲ್ಲಿಂದ ತಂದು ಯಾರಿಗೆ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿಲ್ಲ.

ಇದರ ಸಂಬಂಧ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ‌ ಬಳಿಕವೇ ಗಾಂಜಾ ಸಾಗಾಟ ಬಗ್ಗೆ ಮಾಹಿತಿ ತಿಳಿದು ಬರಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.