ದಾವಣಗೆರೆ: ಮೆಕ್ಕೆಜೋಳ ಹೊಲದಲ್ಲಿ ಗಾಂಜಾ ಬೆಳೆದಿದ್ದನ್ನು ಪತ್ತೆ ಹಚ್ಚಿರುವ ಚನ್ನಗಿರಿ ಪೊಲೀಸರು ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಚನ್ನಗಿರಿ ತಾಲೂಕಿನ ಶೃಂಗಾರಬಾಗು ಗ್ರಾಮದ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ 57 ವರ್ಷದ ಹನುಮಂತ ಎಂಬಾತನನ್ನು ಬಂಧಿಸಿದ್ದಾರೆ. 2 ಲಕ್ಷ ರೂಪಾಯಿ ಮೌಲ್ಯದ 34 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ದಾವಣಗೆರೆ ಜಿಲ್ಲಾ ಅಬಕಾರಿ ಉಪ ಆಯುಕ್ತ ಶಿವಪ್ರಸಾದ ಹಾಗೂ ಡಿವೈಎಸ್ಪಿ ನಾಗರಾಜ ನೇತೃತ್ವದಲ್ಲಿ ರಾತ್ರಿ ವೇಳೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.