ದಾವಣಗೆರೆ: ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಹೊನ್ನಾಳಿ ತಾಲೂಕಿನ ದೊಡ್ಡೇರಿ ಗ್ರಾಮಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ, ಗ್ರಾಮಸ್ಥರಿಗೆ ಮಾಸ್ಕ್ ವಿತರಿಸಿದರು.
ಗ್ರಾಮಸ್ಥರಿಗೆ ಧೈರ್ಯ ತುಂಬಿದ ರೇಣುಕಾಚಾರ್ಯ, ಮನೆ ಮನೆಗೂ ಮಾಸ್ಕ್ ವಿತರಿಸಿ ಜಾಗೃತಿ ಮೂಡಿಸಿದರು. ಸುಮಾರು ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ಮುಖಗವಸು ನೀಡಿದರು.
ಹೊನ್ನಾಳಿ, ನ್ಯಾಮತಿ ತಾಲೂಕಿನಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಜನರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮನೆಯಿಂದ ವಿನಾ ಕಾರಣ ಹೊರ ಬರಬಾರದು. ಎಲ್ಲರೂ ಮನೆಯಲ್ಲೇ ಇರುವಂತೆ ಕೈ ಮುಗಿದು ಪ್ರಾರ್ಥಿಸುತ್ತೇನೆ ಎಂದು ಮನವಿ ಮಾಡಿದರು.