ದಾವಣಗೆರೆ: ಹುಟ್ಟುಹಬ್ಬ ಅಂದರೆ ಕೇಕ್ ಕಟ್ ಮಾಡುವುದು, ಹಾರ ತುರಾಯಿ ಹಾಕಿ ಸಂಭ್ರಮ ಮಾಡುವುದು ಸಾಮಾನ್ಯವಾಗಿರುತ್ತದೆ. ಆದರೆ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ರೇಣುಕಾಚಾರ್ಯ ಮತ್ತು ಅವರ ಪತ್ನಿಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.
ರೇಣುಕಾಚಾರ್ಯ ಅವರ 59ನೇ ಹುಟ್ಟುಹಬ್ಬ ಹಿನ್ನೆಲೆ ಕೇಕ್ ಕಟ್ ಮಾಡುವ ವೇಳೆ ಹಾಲಿನ ಅಭಿಷೇಕ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಸಂತೆ ಮೈದಾನದಲ್ಲಿ ತಮ್ಮ ಪ್ರೀತಿಯ ಶಾಸಕರ ಜನ್ಮದಿನ ಸಂಭ್ರಮಕ್ಕೆ ಕ್ಷೀರಾಭಿಷೇಕ ಮಾಡಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.