ದಾವಣಗೆರೆ : ಲಾಕ್ಡೌನ್ ಹಿನ್ನೆಲೆಯಲ್ಲಿ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ಸಂಕಷ್ಟಕ್ಕೊಳಗಾದ ಬಡ ಕುಟುಂಬದವರಿಗೆ ಸಚಿವ ಭೈರತಿ ಬಸವರಾಜ್ ಆಹಾರ ಧಾನ್ಯಗಳ ಕಿಟ್ ವಿತರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ನೇತೃತ್ವದಲ್ಲಿ ಬಡವರಿಗೆ ಆಹಾರ ಧಾನ್ಯಗಳನ್ನು ಕಿಟ್ ಮೂಲಕ ವಿತರಿಸಲಾಯಿತು. ಸಿಎಂ ರಾಜಕೀಯ ಕಾರ್ಯದರ್ಶ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಇತರೆ ಅಧಿಕಾರಿಗಳು ಬಡವರಿಗೆ ಆಹಾರ ಧಾನ್ಯ ವಿತರಿಸಿದರು.