ETV Bharat / state

ಶಿಕ್ಷಕರ ನೇಮಕ ಮಾಡಿದ್ದು, ಮಕ್ಕಳಿಗೆ ಪಾಠ ಮಾಡಲು, ಸಂಸಾರ ನೋಡಿಕೊಳ್ಳಲು ಅಲ್ಲ: ಸಚಿವ ಬಿ.ಸಿ ನಾಗೇಶ್ ಕಿಡಿ - ದಾವಣಗೆರೆ

ಎಲ್ಲರ ಸಮಸ್ಯೆ ಅರ್ಥ ಆಗುತ್ತದೆ. ಆದರೆ, ಶಿಕ್ಷಕರ ಸಮಸ್ಯೆಗಿಂತ ಮೊದಲು ಮಕ್ಕಳ ಸಮಸ್ಯೆ ಬಗೆಹರಿಸಬೇಕಿದೆ. ಬಳಿಕ ಜಿಲ್ಲಾವಾರು ಶಿಕ್ಷಕರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭರವಸೆ ನೀಡಿದರು.

Minister B.C Nagesh
ಸಚಿವ ಬಿ.ಸಿ ನಾಗೇಶ್
author img

By

Published : Oct 28, 2021, 3:40 PM IST

ದಾವಣಗೆರೆ: ಶಿಕ್ಷಕರನ್ನ ನೇಮಕಾತಿ ಮಾಡಿದ್ದು, ಮಕ್ಕಳಿಗೆ ಪಾಠ ಮಾಡಲಿಕ್ಕೆ ಹೊರತು ಸಂಸಾರ ನೋಡಿಕೊಳ್ಳೋಕೆ ಅಲ್ಲ ಎಂದು ಸಚಿವ ಬಿ.ಸಿ ನಾಗೇಶ್ ಕಿಡಿಕಾರಿದ್ದಾರೆ. ಶಿಕ್ಷಕರ ವರ್ಗಾವಣೆಗೆ ಸರ್ಕಾರ ಕೈಗೊಂಡಿರುವ ಕ್ರಮದಿಂದ ಶಿಕ್ಷಕರು ಪರದಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಬಿ.ಸಿ ನಾಗೇಶ್

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೇರೆ ಗ್ರಾಮದಲ್ಲಿ ಮಾತನಾಡಿದ ಅವರು, ಮೂರು ವರ್ಷದಿಂದ ವರ್ಗಾವಣೆ ಪ್ರಕ್ರಿಯೆ ನಿಲ್ಲಿಸಲಾಗಿತ್ತು. ಎರಡು ದಿನದಿಂದ ಮತ್ತೆ ಶುರುವಾಗಿದ್ದು, ಎಲ್ಲ ಶಿಕ್ಷಕರು ಸಂತೋಷ ವ್ಯಕ್ತಪಡಿಸಿದ್ದಾರೆ ಎಂದರು.

ಕೆಲ ಶಿಕ್ಷಕರ ವೈಯುಕ್ತಿಕ ಸಮಸ್ಯೆಗಳನ್ನ ಸಾಮೂಹಿಕ ಎಂದು ಬಿಂಬಿಸಲಾಗದು. ಕೆಲ ಶಿಕ್ಷಕರಿಗೆ ಕೆಲಸಕ್ಕೆ ಸೇರುವಾಗ ಜಿಲ್ಲಾವಾರು ಆಯ್ಕೆ ಎಂದು ಗೊತ್ತಿರಲಿಲ್ಲವೇ?. ಆಗ ರಾಯಚೂರು, ಮತ್ತೊಂದು ಜಿಲ್ಲೆ ದೂರ ಅಂತಾ ಗೊತ್ತಿರಲಿಲ್ವಾ ಎಂದು ಪ್ರಶ್ನಿಸಿದರು. ಎಲ್ಲರ ಸಮಸ್ಯೆ ಅರ್ಥ ಆಗುತ್ತದೆ. ಆದರೆ, ಶಿಕ್ಷಕರ ಸಮಸ್ಯೆಗಿಂತ ಮೊದಲು ಮಕ್ಕಳ ಸಮಸ್ಯೆ ಬಗೆಹರಿಸಬೇಕಿದೆ. ಬಳಿಕ ಜಿಲ್ಲಾವಾರು ಶಿಕ್ಷಕರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಸಚಿವರು ಭರವಸೆ ನೀಡಿದರು.

ಸದ್ಯಕ್ಕೆ ಯಾವುದೇ ತೊಂದರೆಯಿಲ್ಲ:

ಶಿಕ್ಷಣ ವ್ಯವಸ್ಥೆಗೆ ಕೋವಿಡ್ ಸವಾಲಾಗಿದ್ದು, ಕೇಂದ್ರ, ರಾಜ್ಯ ಸರ್ಕಾರ ಹೆಚ್ಚಿನ ನಿಗಾ ವಹಿಸುತ್ತಿದೆ. ಕೋವಿಡ್​​ 3ನೇ ಅಲೆ ಪರಿಣಾಮ ಬೀರಿದರೆ ಶಾಲೆ ನಿಲ್ಲಿಸಬೇಕಾ ಅಥವಾ ಬೇಡ್ವಾ ಆಮೇಲೆ ನಿರ್ಧಾರ ಮಾಡಲಾಗುತ್ತದೆ. ಸದ್ಯಕ್ಕೆ ಯಾವೂದೇ ತೊಂದರೆ ಇಲ್ಲದೇ ಶಾಲೆ ಪ್ರಾರಂಭ ಆಗಿದೆ ಎಂದರು.

ಕೊಡಗು ರೆಸಿಡೆನ್ಸಿ ಶಾಲೆ ಸೀಲ್​​ಡೌನ್
ಕೊಡುಗು ಜಿಲ್ಲೆಯ ರೆಸಿಡೆನ್ಸಿ ಶಾಲೆಯ ಮಕ್ಕಳಲ್ಲಿ ಕೋವಿಡ್ ಕಾಣಿಸಿಕೊಂಡಿದೆ. ನೆರೆಯ ಕೇರಳದಿಂದ ಸೋಂಕು ಹರಡಿದೆ ಎಂಬ ಮಾಹಿತಿ ಸಿಕ್ಕಿದೆ. ಜಿಲ್ಲಾಧಿಕಾರಿಗಳನ್ನ ಆ ಶಾಲೆಗೆ ಪರಿಶೀಲನೆಗೆ ಕಳುಹಿಸಲಾಗಿದೆ. 450 ಮಕ್ಕಳನ್ನು ಟೆಸ್ಟ್ ಮಾಡಲಾಗಿದ್ದು, 31 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಎಸ್​​ಒಪಿ‌ ಪ್ರಕಾರ ಒಂದು ವಾರ ಕಾಲ ಶಾಲೆಯನ್ನು ಸೀಲ್ ಡೌನ್ ಮಾಡಲು ಹೇಳಲಾಗಿದೆ. ನಾನ್ ರೆಸಿಡೆನ್ಸಿ ಶಾಲೆಯಲ್ಲಿ ಎಲ್ಲಿಯೂ ತೊಂದರೆ ಇಲ್ಲ ಎಂದು ಸಚಿವ ನಾಗೇಶ್​​ ಇದೇ ವೇಳೆ ಸ್ಪಷ್ಟಪಡಿಸಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ

ಎನ್​​ಇಪಿ ವಿರೋಧಿಸಿ ಒಂದು ಪತ್ರವು ನಮಗೆ ಬಂದಿಲ್ಲ. ಅಕಸ್ಮಾತ್ ವಿರೋಧ ಇದ್ದರೆ ತಿಳಿಸಿ. ಎನ್​​ಇಪಿಯಲ್ಲಿ ಮಾತೃ ಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಕಸ್ತೂರಿ ರಂಗನ್ ಅವರು ಆರ್​​ಎಸ್​​ಎಸ್​ನವರು ಎಂಬ ಹೇಳಿಕೆ ವಿಚಾರ ?

ಹೊಸ ಶಿಕ್ಷಣ ನೀತಿಯಲ್ಲಿ ಆರ್​​ಎಸ್​​ಎಸ್ ಅಜೆಂಡಾ ಎಂಬ ಡಿ.ಕೆ ಶಿವಕುಮಾರ್​​ ಹೇಳಿಕೆಗೆ ಪ್ರತಿಕ್ರಿಯಿಸಿ, ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಹಿರಿಯ ಶಿಕ್ಷಣ ತಜ್ಞ ಕಸ್ತೂರಿ ರಂಗನ್ ಇದ್ದಾರೆ. ಅವರು ಏಳು ಜನ ಪಿಎಂಗಳಿಗೆ ಸಲಹೆಗಾರರು ಆಗಿದ್ದವರು. ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ಅವರಿಗೆ ಸಲಹೆಗಾರರು ಆಗಿದ್ದವರು. ಹಾಗಾದರೆ, ಕಸ್ತೂರಿ ರಂಗನ್ ಅವರು ಆರ್​​ಎಸ್​​​ಎಸ್ ನವರಾ? ಎಂದು ಪ್ರಶ್ನಿಸಿದ್ರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.