ETV Bharat / state

ಬಡವರಿಗೆ ನಿವೇಶನ‌ ನೀಡುವ ಬಗ್ಗೆ ಶೀಘ್ರದಲ್ಲೇ ಘೋಷಣೆ: ಭೈರತಿ ಬಸವರಾಜ್ - ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್

ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ದಾಖಲಿಸಿಕೊಳ್ಳದಿರುವ ಬಗ್ಗೆ ಹಾಗೂ ಅಲ್ಲಿ ದಾಖಲಾಗಿರುವ ರೋಗಿಗಳ ಚಿಕಿತ್ಸೆ ಕುರಿತು ಡಿಎಚ್‍ಓ ಮತ್ತು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪರಿಶೀಲಿಸಬೇಕು ಎಂದು ಭೈರತಿ ಬಸವರಾಜ್ ತಿಳಿಸಿದರು.

Minister Byrathi Basavaraj
ಭೈರತಿ ಬಸವರಾಜ್
author img

By

Published : Aug 7, 2020, 8:28 PM IST

ದಾವಣಗೆರೆ: ಜಿಲ್ಲೆಯ ವಿವಿಧ ತಾಲೂಕಿನ ಸರ್ಕಾರಿ ಜಮೀನು ಗುರುತಿಸಿ ಬಡವರಿಗೆ ನಿವೇಶನ ನೀಡುವ ಕುರಿತು ಶೀಘ್ರದಲ್ಲಿಯೇ ಘೋಷಣೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ಒತ್ತಾಯದ ಮೇರೆಗೆ ಜಿಲ್ಲೆಯಲ್ಲಿ ಸರ್ಕಾರಿ ಭೂಮಿ ಜಮೀನು ಗುರುತಿಸಿ ಬಡವರಿಗೆ ನಿವೇಶನ, ವಸತಿ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಡವರಿಗೆ ನಿವೇಶನ‌ ನೀಡುವ ಬಗ್ಗೆ ಶೀಘ್ರದಲ್ಲೇ ಘೋಷಣೆ: ಭೈರತಿ ಬಸವರಾಜ್

2020-21ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಕೊವಿಡ್-19 ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಸರಿಯಾದ ಬೆಡ್ ವ್ಯವಸ್ಥೆ ಕಲ್ಪಿಸಬೇಕು ಹಾಗೂ ರೈತರಿಗೆ ಯೂರಿಯಾ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿದೆ. ಯೂರಿಯಾ ಜೊತೆಗೆ ಇತರೆ ರಸಗೊಬ್ಬರ ಕೊಳ್ಳುವಂತೆ ರೈತರಿಗೆ ಡೀಲರ್​ಗಳು ಒತ್ತಾಯ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ರೈತರಿಗೆ ಯಾವ ರಸಗೊಬ್ಬರ ಬೇಕಾಗಿರುವುದೋ ಅದನ್ನು ಮಾತ್ರ ವಿತರಿಸಬೇಕು. ಬಲವಂತವಾಗಿ ಬೇರೆ ರಸಗೊಬ್ಬರ ತೆಗೆದುಕೊಳ್ಳಿ ಎಂದು ಒತ್ತಡ ಹೇರಬಾರದು. ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ದಾಖಲಿಸಿಕೊಳ್ಳದಿರುವ ಬಗ್ಗೆ ಹಾಗೂ ಅಲ್ಲಿ ದಾಖಲಾಗಿರುವ ರೋಗಿಗಳ ಚಿಕಿತ್ಸೆ ಕುರಿತು ಡಿಎಚ್‍ಓ ಮತ್ತು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪರಿಶೀಲಿಸಬೇಕು. ಇದರ ಜೊತೆಗೆ ರೋಗಿಗಳ ಚಿಕಿತ್ಸೆ ಕುರಿತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಮತ್ತು ಬೆಸ್ಕಾಂ ಇಲಾಖೆಯ ಅಧಿಕಾರಿ ಸೇರಿದಂತೆ ಜಲಸಂಪನ್ಮೂಲ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದರು.

ಜಿಲ್ಲೆಯಲ್ಲಿ ಮೆಡಿಕಲ್ ಶಾಪ್‍ಗಳಲ್ಲಿ ಮಾತ್ರೆಗಳನ್ನು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರು ಕೇಳಿ ಬಂದಿದೆ. ಈ ಕುರಿತು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ ಅವರು, ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಾವಿನ ಪ್ರಮಾಣ ತಗ್ಗಿಸಲು ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಲು ಮುಂದಾಗಬೇಕಿದೆ ಎಂದರು.

ನಮ್ಮ ಸರ್ಕಾರ ರೈತರ ಪರವಾಗಿದೆ. ಕೊರೊನಾ ಸಂದರ್ಭದಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆ ಆಗಲು ನಾವು ಬಿಡುವುದಿಲ್ಲ. ಮುಂದಿನ ಸಭೆಯೊಳಗೆ ಸರ್ಕಾರದ ಎಲ್ಲಾ ಯೋಜನೆಗಳನ್ನು ರೈತರಿಗೆ ತಲಪಿಸಬೇಕು. ರೈತರಿಗೆ ತಲುಪಿಸಿದ ಯೋಜನೆಗಳನ್ನು ಫಲಾನುಭವಿಗಳ ಹೆಸರಿನೊಂದಿಗೆ ಎಲ್ಲಾ ಅಂಕಿ ಅಂಶಗಳ ವರದಿಯನ್ನು ಸಭೆಯಲ್ಲಿ ಒಪ್ಪಿಸಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ನೇರ ಹೊಣೆಯಾಗಲಿದ್ದು, ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ‌ ನೀಡಿದರು.

ಮಳೆಗಾಲದಲ್ಲಿ ಯಾವುದೇ ರಸ್ತೆ ಕಾಮಗಾರಿ ಕೈಗೊಳ್ಳದಿರಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಏಕೆಂದರೆ ಡಾಂಬರೀಕರಣ ಎಲ್ಲ ಹಾಳಾಗಿ ಕೊಚ್ಚಿ ಹೋಗುವ ಸಾಧ್ಯತೆ ಹೆಚ್ಚಿದೆ. ಇದರ ಬದಲಾಗಿ ಬೇಸಿಗೆಯಲ್ಲಿ ಮಾಡಿದರೆ ಒಳಿತು ಎಂದ ಅವರು, ಮಳೆಗಾಲ ಇದಾಗಿದೆ. ಹರಿಹರ, ಹೊನ್ನಾಳಿ ಸೇರಿದಂತೆ ನದಿ ಪಕ್ಕದಲ್ಲಿರುವ ಹಳ್ಳಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಪ್ರವಾಹ ಭೀತಿ ಉಂಟಾದರೆ ಅಲ್ಲಿರುವ ಜನರ ಸ್ಥಳಾಂತರ ಮಾಡಬೇಕು. ಜೊತೆಗೆ ಕಾಳಜಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.