ETV Bharat / state

ಅಕ್ರಮ ಗಣಿಗಾರಿಕೆ ಬಗ್ಗೆ ಡಿಸಿ ಬಳಿ ವರದಿ ಕೇಳಿದ್ದೇನೆ: ಭೈರತಿ ಬಸವರಾಜ್​​

ದಾವಣಗೆರೆ ಜಿಲ್ಲೆಯ ಹಲವೆಡೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಜಿಲ್ಲಾಧಿಕಾರಿಗಳು ಅದರ ಬಗ್ಗೆ ಕ್ರಮ ತೆಗೆದುಕೊಂಡಿದ್ದೇವೆ ಎನ್ನುತ್ತಾರೆ. ಆದರೆ ಅದು ಒಪ್ಪುವಂತಹದ್ದಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

Minister Byrathi basavaraj
Minister Byrathi basavaraj
author img

By

Published : Jan 27, 2021, 6:22 PM IST

Updated : Jan 27, 2021, 6:29 PM IST

ದಾವಣಗೆರೆ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗಳಿದ್ದು, ಅದರ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಸಮಗ್ರ ವರದಿ ಕೇಳಿದ್ದೇನೆ ಎಂದು ನಗರಾಭಿವೃದ್ಧಿ ಹಾಗೂ ದಾವಣಗೆರೆ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಮಾಹಿತಿ ನೀಡಿದರು.

ಅಕ್ರಮ ಗಣಿಗಾರಿಕೆ ಬಗ್ಗೆ ಮಾತನಾಡಿದ ಸಚಿವ ಭೈರತಿ

ದಾವಣಗೆರೆಯಲ್ಲಿ ಮಾತನಾಡಿದ ಅವರು, ಜಗಳೂರು ಸೇರಿದಂತೆ ಎರಡು ಕಡೆ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ‌ ಎಂಬ ಮಾಹಿತಿ ಇದ್ದು, ಅದರ ಬಗ್ಗೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದ್ದಾರೆ. ನಾನು ಇದನ್ನು ಒಪ್ಪುವುದಿಲ್ಲ. ಮುಂದಿನ ದಿನಗಳಲ್ಲಿ ಏರುಪೇರು ಆದಂತಹ ಸಂದರ್ಭದಲ್ಲಿ ಅದಕ್ಕೆ ನೀವೇ ಹೊಣೆಗಾರರು ಎಂದು ಹೇಳಿದ್ದೇನೆ. ಜಿಲ್ಲೆಯಲ್ಲಿ ಯಾವ ಯಾವ ತಾಲೂಕುಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ, ಎಷ್ಟು ಕ್ರಷರ್​ಗಳಿವೆ ಎಂದು ಕೂಲಂಕಷವಾಗಿರುವ ವರದಿ ನೀಡುವಂತೆ ತಿಳಿಸಿದ್ದೇನೆ. ಈ ಕುರಿತು ಮುಂದಿನ ದಿನಗಳಲ್ಲಿ ನಾನು ಚರ್ಚಿಸುತ್ತೇನೆ ಎಂದರು.

Last Updated : Jan 27, 2021, 6:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.