ದಾವಣಗೆರೆ : ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಬಿಡುಗಡೆಯಾದ ಅನುದಾನವನ್ನು ಏಕೆ ಬಳಕೆ ಮಾಡಿಕೊಂಡಿಲ್ಲ ಎಂದು ಅಧಿಕಾರಿಗಳ ಮೇಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಗದರಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನುದಾನ ಬಳಕೆಯಾಗದೇ ಇರುವುದನ್ನು ಕಂಡ ಸಚಿವರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 11 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.
ಅದರಲ್ಲಿ ಬರೀ ₹2 ಕೋಟಿ ಹಣ ಮಾತ್ರ ಬಳಕೆ ಮಾಡಿಕೊಂಡಿದ್ದೀರಿ ಏಕೆ?, ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲವೋ ಅಥವಾ ಕಾಮಗಾರಿ ಕುಂಟಿತವಾಗಿವೆಯಾ? ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು. ಬಳಿಕ ಸಚಿವರ ಪ್ರಶ್ನೆಗೆ ಉತ್ತರಿಸಿದ ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ನಾಗಪ್ಪನವರು, ಗುತ್ತೆಗೆದಾರರು ಕೆಲಸ ಮಾಡಿದ್ದಾರೆ. ಆದರೆ, ಬಿಲ್ ಕೇಳಿಲ್ಲ ಎಂದು ಉತ್ತರಿಸದರು.
ಸಭೆಯಲ್ಲಿ ಜಗಳೂರು ಶಾಸಕ ಎಸ್.ವಿ. ರಾಮಚಂದ್ರಪ್ಪ, ದಾವಣಗೆರೆ ಉತ್ತರ ಮತ ಕ್ಷೇತ್ರದ ಶಾಸಕ ಎಸ್ ಎ ರವೀಂದ್ರನಾಥ್, ಸಂಸದ ಜಿ ಎಂ ಸಿದ್ದೇಶ್ವರ್ ಭಾಗಿಯಾಗಿದ್ದರು.