ಹರಿಹರ/ ದಾವಣಗೆರೆ: ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರು ಬೆಳ್ಳೂಡಿ ಶಾಖಾ ಮಠಕ್ಕೆ ಜಿಲ್ಲಾ ಉಸ್ತುವಾರಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದ್ದರು.
ದಾವಣಗೆರೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನೆಡೆಸಿದ ನಂತರ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದ ಹೊರವಲಯದಲ್ಲಿರುವ ಕನಕ ಶಾಖಾ ಮಠಕ್ಕೆ ತೆರಳಿ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ನಂತರ ಮಠದ ಅಭಿವೃದ್ಧಿ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಮಠದಿಂದ ಹೊರ ಬಂದ ನಂತರ ಅಧಿಕಾರಿಗಳೊಡನೆ ಮಾತನಾಡಿದ ಅವರು, ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಪಡೆದರು. ಹಕ್ಕಿಜ್ವರದ ನಿಯಂತ್ರಣಕ್ಕೆ ಸಂಬಂಧಪಟ್ಟ ಸಚಿವರೊಡನೆ ಮಾತನಾಡಿ ಅವರಿಂದಲೇ ಹಕ್ಕಿಜ್ವರದ ಬಗ್ಗೆ ಸ್ಪಷ್ಟನೆ ಕೊಡಿಸುತ್ತೇನೆ ಎಂದರು.