ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಪುತ್ರ ಪ್ರಯಾಣಿಸುತ್ತಿದ್ದ ಕಾರು ನಗರದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಪ್ರಶಾಂತ್ ಶೆಟ್ಟರ್, ಪತ್ನಿ ಅಂಚಲ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ.
ಡಿವೈಡರ್ ಬಳಿ KA-05 AR-6577 ನಂಬರ್ನ ಲಾರಿ, KA 03 NE 8 ನಂಬರ್ನ ಲ್ಯಾಂಡ್ ರೋವರ್ ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ.