ದಾವಣಗೆರೆ: ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಇಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ. ಇನ್ನು ಬಂದ್ಗೆ ದಾವಣಗೆರೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಹಣ್ಣು - ತರಕಾರಿ ಸೇರಿದಂತೆ ಹೂವಿನ ಮಾರುಕಟ್ಟೆ ತೆರೆಯಲಾಗಿದೆ.
ಕೆಎಸ್ಆರ್ಟಿಸಿ, ಆಟೋ ಮತ್ತು ಖಾಸಗಿ ಬಸ್ಗಳು ಎಂದಿನಂತೆ ಸಂಚಾರ ಮುಂದುವರೆಸಿದೆ. ಆದರೆ, ಕಾರ್ಮಿಕ ಮತ್ತು ರೈತ ಪರ ಸಂಘಟನೆಗಳು ಒತ್ತಾಯಪೂರ್ವಕವಾಗಿ ಬಂದ್ ಮಾಡಲು ಮುಂದಾಗಿದೆ. ಈ ಸಂದರ್ಭದಲ್ಲಿ ಎಸ್ಪಿ ರಿಷ್ಯಂತ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ: ನಗರದ ಜಯದೇವ ಸರ್ಕಲ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಬಣದ ರೈತ ಸಂಘವು ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಆರ್ಕೆಎಸ್, ಕಾರ್ಮಿಕ ಸಂಘಟನೆಗಳು ಸೇರಿದಂತೆ 20ಕ್ಕೂ ಹೆಚ್ಚು ಸಂಘಟನೆಗಳಿಂದ ಬಂದ್ಗೆ ಬೆಂಬಲ ವ್ಯಕ್ತವಾಗಿದೆ.
ತರಕಾರಿ ಸುರಿದು ಆಕ್ರೋಶ: ರೈತ ಸಂಘ ಹುಚ್ಚವ್ವನಹಳ್ಳಿ ಮಂಜುನಾಥ್ ನೇತೃತ್ವದ ಬಣದಿಂದ ರಸ್ತೆಗೆ ತರಕಾರಿ ಸುರಿದು ಪ್ರತಿಭಟನೆ ನಡೆಸಲಾಯಿತು. ನಗರದ ಜಯದೇವ ಸರ್ಕಲ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಬೆಲೆ ಏರಿಕೆಯಾಗುತ್ತಿದೆ. ರೈತರ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಸ್ಗಳನ್ನು ತಡೆದ ರೈತ ಸಂಘಟನೆಗಳು: ಬಸ್ ನಿಲ್ದಾಣಕ್ಕೆ ಆಗಮಿಸಿದ ರೈತ ಹಾಗೂ ಕಾರ್ಮಿಕ ಸಂಘಟನೆಗಳು ಬಂದ್ಗೆ ಬೆಂಬಲಿಸುವಂತೆ ಬಸ್ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಮನವಿ ಮಾಡಿದರು. ಬಸ್ ನಿಲ್ದಾಣದ ಎರಡು ಕಡೆ ನಿಂತ ರೈತ ಸಂಘಟನೆಗಳು ಬಸ್ಗಳ ಸಂಚಾರಕ್ಕೆ ಅಡ್ಡಿಪಡಿಸಿದರು. ಇದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣ ಆಯಿತು.