ದಾವಣಗೆರೆ : ಬಿಜೆಪಿ ಸಚಿವರು, ಶಾಸಕರು ಒಗ್ಗಟ್ಟಾಗಿದ್ದಾರೆ. ಕಾಂಗ್ರೆಸ್‌ನವರು ಅಧಿಕಾರದ ಹಗಲುಗನಸು ಕಾಣುತ್ತಿದ್ದಾರೆ. ಬಿಜೆಪಿಯ ಎಲ್ಲಾ ಶಾಸಕರು ಸಿಂಹಗಳಿದ್ದಂತೆ.
ಸಿದ್ದರಾಮಯ್ಯ ಹಾಗೂ ಡಿಕೆಶಿ ಹಗಲುಗನಸು ಕಾಣುತ್ತಾ ಭ್ರಮಾ ಲೋಕದಲ್ಲಿ ಇರಬೇಡಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.
ಹೊನ್ನಾಳಿ ಪಟ್ಟಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ಗೆ ಬರುವವರು ಸಾಕಷ್ಟು ಜನ ಶಾಸಕರಿದ್ದಾರೆ ಎಂಬ ಡಿಕೆಶಿ, ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಿಮ್ಮ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಹೆಸರು ಬಹಿರಂಗಪಡಿಸಿ, ಕಾಂಗ್ರೆಸ್‌ನವರು ತಮ್ಮಲ್ಲಿರುವ ವ್ಯತ್ಯಾಸಗಳನ್ನು ಮರೆಮಾಚಲು ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ.
ಕೇಂದ್ರದಲ್ಲಿ ಎರಡು ಬಾರಿ ಪ್ರತಿಪಕ್ಷದ ಸ್ಥಾನ ಕಳೆದುಕೊಂಡಿದ್ದೀರಿ, ಕಾಂಗ್ರೆಸ್ ದೇಶದಲ್ಲಿಯೇ ಅಡ್ರೆಸ್ ಇಲ್ಲದಂತಾಗಿದೆ. ರಾಜ್ಯದಲ್ಲಿ ಹಿಂದೆ ಕಾಂಗ್ರೆಸ್ ನಿಂದ 121 ಶಾಸಕರು ಇದ್ರಿ, ಈಗ ಎಷ್ಟು ಜನ ಇದೀರಾ ಲೆಕ್ಕಾ ಹಾಕಿ, ನೀವು ಧರ್ಮ ಒಡೆಯುತ್ತೀರಿ, ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುತ್ತೀರಿ, ನಾಟಕೀಯವಾಗಿ ಪಾದಯಾತ್ರೆ ಮಾಡುತ್ತೀರಿ ಎಂದು ವಾಗ್ದಾಳಿ ನಡೆಸಿದರು.
2023ಕ್ಕೆ ಬಿಜೆಪಿ ಅಧಿಕಾರಕ್ಕೆ ಬಂದೆ ಬರುತ್ತೆ : ಡಿಕೆಶಿ ಹಾಗೂ ಸಿದ್ದರಾಮಯ್ಯ ಬಿಜೆಪಿಗೆ ಬಂದರೂ ಆಶ್ಚರ್ಯಪಡಬೇಕಿಲ್ಲ. 2023ಕ್ಕೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವರು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ನಮ್ಮ ಶಾಸಕರ ಜೊತೆ ಮಾತನಾಡಿದ್ದಾರೆ. ಕಾಂಗ್ರೆಸ್ನಲ್ಲಿದ್ದವರಿಗೆ ಭವಿಷ್ಯ ಇಲ್ಲ, ಕಾಂಗ್ರೆಸ್ ಮುಳುಗುವ ಹಡುಗು ಎಂದರು.
ಮಧ್ಯ ಕರ್ನಾಕಕ್ಕೆ ಒಂದು ಸಚಿವ ಸ್ಥಾನ ಕೇಳಿದ್ದೇವೆ : ನಾಲ್ಕು ಗೋಡೆಗಳ ಮಧ್ಯೆ ಸಚಿವ ಸ್ಥಾನಕ್ಕಾಗಿ ವರಿಷ್ಠರಿಗೆ ಕೇಳಿದ್ದೇವೆ. ಮಧ್ಯ ಕರ್ನಾಕಕ್ಕೆ ಒಂದು ಸಚಿವ ಸ್ಥಾನ ನೀಡಬೇಕೆಂದು ಸಿಎಂಗೆ ಮನವಿ ಮಾಡಿದ್ದೇವೆ. ಸಿಎಂ ಬೊಮ್ಮಾಯಿಯವರು ಸಮರ್ಥರಾಗಿದ್ದಾರೆ, ಎಲ್ರೂ ಒಟ್ಟಾಗಿ ಒಂದಾಗಿ ಕೆಲಸ ಮಾಡುತ್ತಿದ್ದೇವೆ.
ನಾನು ಯತ್ನಾಳ್ ಆತ್ಮೀಯ ಸ್ನೇಹಿತರು, ನಮ್ಮ ಮಧ್ಯೆ ಸಣ್ಣಪುಟ್ಟ ವ್ಯತ್ಯಾಸಗಳು ಬಂದಿವೆ. ಯತ್ನಾಳ್ ಹಾಗೂ ನನ್ನಿಂದ ಪಕ್ಷಕ್ಕೆ ಮುಜುಗರ ಆಗಬಾರದೆಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಮಾತನಾಡಿದ್ದೆವು. 2023ಕ್ಕೆ ಬಿಜೆಪಿ ಅಧಿಕಾರಕ್ಕೆ ಬರಲು ಒಟ್ಟಾಗಿ ನಾವು ಇಬ್ಬರು ಆತ್ಮೀಯ ಸ್ನೇಹಿತರಾಗಿರುತ್ತೇವೆ, ಸಚಿವ ಸ್ಥಾನಕ್ಕಾಗಿ ನಾನು ಯಾವತ್ತೂ ಹಠ ಹಿಡಿದಿಲ್ಲ, ಸಚಿವ ಸ್ಥಾನಕ್ಕೆ ಹಠ ಹಿಡಿದಿದ್ದರೆ ಯಾವತ್ತೋ ಸಚಿವನಾಗುತ್ತಿದ್ದೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ