ETV Bharat / state

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಕುಂಠಿತ: ಶಾಸಕ ಎಸ್.ರಾಮಪ್ಪ

author img

By

Published : Jul 9, 2020, 10:55 AM IST

ಹರಿಹರ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಿ ನೀಡಿದ್ದರೂ ಇದುವರೆಗೆ ಹಣ ಬಿಡುಗಡೆಯಾಗಿಲ್ಲ. ಬಿಜೆಪಿ ಸರ್ಕಾರದಲ್ಲಿ ಹಣವಿಲ್ಲದ ಕಾರಣ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆಯಾಗುತ್ತಿಲ್ಲ ಎಂದು ಶಾಸಕ ಎಸ್. ರಾಮಪ್ಪ ಆರೋಪಿಸಿದರು.

Harihara
Harihara

ಹರಿಹರ: ಬಿಜೆಪಿ ಸರ್ಕಾರದ ಖಜಾನೆಯಲ್ಲಿ ಹಣವಿಲ್ಲದ ಕಾರಣ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಶಾಸಕ ಎಸ್. ರಾಮಪ್ಪ ಆರೋಪಿಸಿದರು.

ನಗರದ 11ನೇ ವಾರ್ಡ್‌ ನ ಕೇಶವ ನಗರದಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಪಾರ್ಕ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು,
ಹರಿಹರ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಿ ನೀಡಿದ್ದರೂ ಇದುವರೆಗೆ ಒಂದು ನಯಾಪೈಸೆ ಬಿಡುಗಡೆಯಾಗಿಲ್ಲ .ಬಹುತೇಕ ಬಿಜೆಪಿ ಸರ್ಕಾರದಲ್ಲಿ ಹಣವಿಲ್ಲದ ಕಾರಣ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆಯಾಗುತ್ತಿಲ್ಲ ಎಂದರು.

ನಗರಸಭೆಯ 2019-20ನೇ ಸಾಲಿನ 14 ನೇ ಹಣಕಾಸು ಯೋಜನೆಯಡಿ ಸುಮಾರು 9 ಲಕ್ಷ ರೂ. ವೆಚ್ಚದಲ್ಲಿ ಈ ಪಾರ್ಕ್ ಅಭಿವೃದ್ಧಿಪಡಿಸಿ, ಈ ಭಾಗದ ಹಿರಿಯರಿಗೆ ವಾಕ್ ಮಾಡಲು ಹಾಗೂ ಮಕ್ಕಳಿಗೆ ಆಟವಾಡಲು ಅನುಕೂಲ ಮಾಡಿಕೊಡಲಾಗಿದೆ. ಈ ವಾರ್ಡ್ ಗೆ 10 ಲಕ್ಷ ರೂಪಾಯಿ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಟಿಪ್ಪು ನಗರದ ಬೀಡಿ ಕಾರ್ಮಿಕರ ಕಾಲೋನಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸುಮಾರು 60 ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಮಾಡಿಸಲಾಗಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.