ದಾವಣಗೆರೆ: ಕೊರೊನಾ ಎರಡನೇ ಅಲೆ ಭೀತಿಯಿಂದ ಸರ್ಕಾರ ಕೆಲ ನಿಯಮಗಳನ್ನು ಜಾರಿಗೆ ತಂದಿದ್ರು ಕೂಡ ಆ ನಿಯಮಗಳು ಶಾಸಕ ರೇಣುಕಚಾರ್ಯ ಅವರಿಗೆ ಅನ್ವಯಿಸುವುದಿಲ್ಲ ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿಬಂದಿದೆ.
ಜಿಲ್ಲೆಯ ಹೊನ್ನಾಳಿ ಪಟ್ಟಣದ ಹಿರೆಕಲ್ಮಠದಲ್ಲಿ ಜೈ ಶ್ರೀರಾಮ್ ಯುವಕರ ಸಂಘಟನೆ ಆಯೋಜಿಸಿದ್ದ ಟಗರಿನ ಕಾಳಗದಲ್ಲಿ ಭಾಗವಹಿಸಿದ್ದ ಶಾಸಕ ರೇಣುಕಾಚಾರ್ಯ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕರು ಸಾಮಾಜಿಕ ಅಂತರ, ಮಾಸ್ಕ್ ಇಲ್ಲದೆ, ಎಲ್ಲರಿಗೂ ಹ್ಯಾಂಡ್ ಶೇಕ್ ಮಾಡುವ ಮೂಲಕ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ನಗರದಲ್ಲಿ ಮಾಸ್ಕ್ ಇಲ್ಲದೆ ಓಡಾಡುವವರಿಗೆ ಜಿಲ್ಲಾಡಳಿತ 250 ರೂಪಾಯಿ ದಂಡವನ್ನು ವಿಧಿಸುತ್ತಿದ್ದರೆ, ಇಲ್ಲಿ ಜನಪ್ರತಿನಿಧಿಗಳೇ ನಿಯಮ ಉಲ್ಲಂಘಿಸುತ್ತಿದ್ದಾರೆ. ಜನಸಾಮಾನ್ಯರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೊಂದು ನ್ಯಾಯವಾ ಎಂಬ ಪ್ರಶ್ನೆ ಸಾರ್ವಜನಿಕರದ್ದಾಗಿದೆ.