ದಾವಣಗೆರೆ: ನನ್ನ ಜೀವನದಲ್ಲಿ ಯಾವತ್ತೂ ಯಡಿಯೂರಪ್ಪನವರನ್ನು ಮಾಜಿ ಮುಖ್ಯಮಂತ್ರಿ ಅಂತ ಕರೆಯುವುದಿಲ್ಲ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದರು.
ಹೊನ್ನಾಳಿ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ನಡೆದ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಾ, ಎಲ್ಲೋ ಇದ್ದಿದ್ದ ನನ್ನ ರಾಜಕೀಯಕ್ಕೆ ತಂದು ಶಾಸಕನಾಗಿ ಮಾಡಿದರು. ಅವರನ್ನು ಯಾವತ್ತೂ ಮಾಜಿ ಸಿಎಂ ಅಂತ ಕರೆಯುವುದಿಲ್ಲ ಎಂದರು.
ಇದನ್ನೂ ಓದಿ: ನಾನು ಸಚಿವನಾಗಬೇಕೆಂದು ಲಾಬಿ ಮಾಡಿಲ್ಲ, ದೆಹಲಿಗೂ ಹೋಗಿಲ್ಲ: ರೇಣುಕಾಚಾರ್ಯ
ಇದೇ ವೇಳೆ, ಹೊನ್ನಾಳಿ- ನ್ಯಾಮತಿ ತಾಲೂಕುಗಳ ಅಭಿವೃದ್ಧಿ ಕಾರ್ಯಗಳಿಗೆ ನೀಡಿರುವ ಅನುದಾನವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅವಳಿ ತಾಲೂಕುಗಳಿಗೆ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ. ಸಾವಿರಾರು ಕೋಟಿ ರೂಪಾಯಿ ಅನುದಾನ ಒದಗಿಸಿದ್ದಾರೆ. ಅವರು ನೀಡಿರುವ ಕೊಡುಗೆಯನ್ನು ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.