ದಾವಣಗೆರೆ: ಮಾರ್ಚ್ 5ರಂದು ಮಂಡಿಸಲಿರುವ ಬಜೆಟ್ ಮೇಲೆ ಈಗಾಗಲೇ ಜನತೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಅಂತೆಯೇ ಜಗಳೂರಿನ ಶಾಸಕ ಎಸ್. ವಿ. ರಾಮಚಂದ್ರ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲ ಬೇಡಿಕೆಗಳನ್ನ ಸಿಎಂ ಮುಂದಿಟ್ಟಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಗಳೂರಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಸಮಗ್ರ ಕುಡಿಯುವ ನೀರು ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಬಜೆಟ್ನಲ್ಲಿ ನೀಡಬೇಕು. ಈಗಲೇ ಎಲ್ಲಾ ಬೇಡಿಕೆಗಳನ್ನು ಸಲ್ಲಿಸಲಾಗದು. ಹಂತ ಹಂತವಾಗಿ ಮನವಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
120 ಕೋಟಿ ರೂಪಾಯಿಗೂ ಅಧಿಕ ವೆಚ್ಚದ ಕಾಮಗಾರಿಗಳು ಸಮಾರೋಪಾದಿಯಲ್ಲಿ ಸಾಗುತ್ತಿವೆ. ವಿಮಾನ ನಿಲ್ದಾಣ ನಿರ್ಮಾಣವಾದ್ರೆ ಒಳ್ಳೆಯದು ಎಂದರು.