ETV Bharat / state

ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಬಿಜೆಪಿ ಎಷ್ಟು ಸಹಾಯ ಮಾಡಿದೆ: ಹೊರಟ್ಟಿ ವಾಗ್ದಾಳಿ

author img

By

Published : Oct 12, 2020, 8:27 AM IST

ಜೆಡಿಎಸ್ ಪಕ್ಷದಿಂದ ಆಯೋಜಿಸಲಾಗಿದ್ದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ವಿರುದ್ಧ ವಿಧಾನ ಪರಿಷತ್​ ಸದಸ್ಯ ಬಸವರಾಜ್ ಹೊರಟ್ಟಿ ವಾಗ್ದಾಳಿ ನಡೆಸಿದ್ದಾರೆ.

ವಿಧಾನಪರಿಷತ್​ ಸದಸ್ಯ ಬಸವರಾಜ್ ಹೊರಟ್ಟಿ
ವಿಧಾನಪರಿಷತ್​ ಸದಸ್ಯ ಬಸವರಾಜ್ ಹೊರಟ್ಟಿ

ಹರಿಹರ: ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ದೇಶದಲ್ಲಿ ಎರಡು ಕೋಟಿ ಉದ್ಯೋಗ ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಈವರೆಗೂ ಎಷ್ಟು ಜನರಿಗೆ ಉದ್ಯೋಗ ನೀಡಿದ್ದಾರೆ ಎಂಬುದನ್ನು ಪದವೀಧರರು ಅರ್ಥ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್​ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದರು.

ನಗರದಲ್ಲಿ ಜೆಡಿಎಸ್ ಪಕ್ಷದಿಂದ ಆಯೋಜಿಸಲಾಗಿದ್ದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,
2008ರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನನಗೆ ಶಿಕ್ಷಣ ಸಚಿವ ಆಗುವ ಅವಕಾಶ ಸಿಕ್ಕಿತು. ಆ ಸಂದರ್ಭದಲ್ಲಿ ರಾಜ್ಯದ ಒಟ್ಟು 54 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಯಿತು. ಆ ಸಂದರ್ಭದಲ್ಲಿ ಶಿಕ್ಷಕರ ವರ್ಗಾವಣೆಯಲ್ಲಿ ವ್ಯಾಪಕವಾಗಿ ನಡೆಯುತ್ತಿದ್ದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಯಿತು. 9,896 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಂಬಡ್ತಿ ನೀಡಲಾಯಿತು. ರಾಜ್ಯದಲ್ಲಿ ಅನುದಾನ ರಹಿತ ಶಾಲೆಗಳಿಗೆ ಅನುದಾನ ವಿಸ್ತರಣೆ ಮಾಡಿದ ಪರಿಣಾಮ ಸುಮಾರು 30 ಸಾವಿರ ಶಿಕ್ಷಕರಿಗೆ ಅನುಕೂಲವಾಯಿತು ಎಂದರು.

ಹೀಗೆ ನಮ್ಮ ಜೆಡಿಎಸ್ ಸರ್ಕಾರದ ಸಂದರ್ಭದಲ್ಲಿ ಹಲವಾರು ಕ್ಷೇತ್ರಗಳಲ್ಲಿ ಉದ್ಯೋಗ ಕಲ್ಪಿಸಲಾಯಿತು. ಇದನ್ನು ಶಿಕ್ಷಕರು ಹಾಗೂ ಪದವೀಧರರು ಮರೆಯಬಾರದು. ಯಾರು ಕೆಲಸವನ್ನು ಮಾಡುತ್ತಾರೆ ಎಂಬುದನ್ನು ತಿಳಿದು ಮತ ಚಲಾಯಿಸಬೇಕು ಎಂದರು.

ಅಭ್ಯರ್ಥಿ ಚೌಡರೆಡ್ಡಿಯವರು ಸರಳ ಮತ್ತು ಮೃದು ಸ್ವಭಾವದವರಾಗಿದ್ದು, ತಮ್ಮ ಬಳಿ ಯಾರೇ ಬರಲಿ ಅವರ ಸಮಸ್ಯೆಗಳನ್ನು ನಿವಾರಣೆ ಮಾಡುವುದರಲ್ಲಿ ಉತ್ತಮರು. ಹೀಗಾಗಿ ಇಂಥವರನ್ನು ಆಯ್ಕೆ ಮಾಡಿ ಮತ್ತೆ ವಿಧಾನ ಪರಿಷತ್​​ಗೆ ಕಳಿಸಿದರೆ ನಮ್ಮ ಕೈ ಬಲವಾಗುತ್ತದೆ ಎಂದರು.

ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ಮಾತನಾಡಿ, ಕಳೆದ ಬಾರಿ ನಾನು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದಾಗ ನೀವು ನನ್ನನ್ನು ಆಶೀರ್ವದಿಸಿ ವಿಧಾನ ಪರಿಷತ್​ಗೆ ಆಯ್ಕೆ ಮಾಡಿ ಕಳುಹಿಸಿದ್ದೀರಿ. ಈ ಅವಧಿಯಲ್ಲಿ ಸದನದ ಒಳಗೆ ಮತ್ತು ಸದನದ ಹೊರಗೆ ನನ್ನ ಕೈಲಾದ ಮಟ್ಟಿಗೆ ಪ್ರಾಮಾಣಿಕವಾಗಿ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಿದ ಆತ್ಮ ತೃಪ್ತಿ ಇದೆ. ಈ ಅವಕಾಶವನ್ನು ನೀಡಿದ ನಿಮಗೆ ನಾನು ಎಂದಿಗೂ ಋಣಿಯಾಗಿರುತ್ತೇನೆ ಎಂದರು.

ಈ ಹಿಂದೆ ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್ ಅವರ ಮಾರ್ಗದರ್ಶನದಲ್ಲಿ ನಾನು ಕಾರ್ಯನಿರ್ವಹಿಸುತ್ತಾ ಬಂದಿದ್ದು, ಈ ಬಾರಿಯೂ ಅವರ ಮಾರ್ಗದರ್ಶನದಂತೆ ಮುಂದುವರೆಯುತ್ತೇನೆ. ಯಾವುದೇ ಸಮಸ್ಯೆಗಳಿದ್ದರು ನನ್ನ ಶಕ್ತಿ ಮೀರಿ ಪರಿಹರಿಸಲು ಪ್ರಯತ್ನ ಮಾಡುತ್ತೇನೆ. ಈ ಬಾರಿಯೂ ನನಗೆ ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡಬೇಕೆಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.