ದಾವಣಗೆರೆ/ಹರಿಹರ: ಕೊರೊನಾ ವೈರಸ್ ವಿಶ್ವವ್ಯಾಪಿ ಭಯ ಮೂಡಿಸುತ್ತಿರುವ ಬೆನ್ನಲ್ಲೇ ಜಿಲ್ಲೆಯ ಕೆಂಚನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಕೋಳಿ ಫಾರ್ಮ್ನಲ್ಲಿ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಕೋಳಿಗಳ ಸಾವಿಗೆ ಕಾರಣ ಏನೆಂದು ತಿಳಿಯದ ಜನರು ಭಯಭೀತರಾಗಿದ್ದಾರೆ.
ತಾಲೂಕಿನ ಕೆಂಚನಹಳ್ಳಿ ಮತ್ತು ಕುರುಬರಹಳ್ಳಿ ಗ್ರಾಮದಲ್ಲಿರುವ ಕೋಳಿ ಫಾರಂಗಳಲ್ಲಿ ನೂರಾರು ಕೋಳಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ. ಅಷ್ಟೇ ಅಲ್ಲದೆ ಬೆಳ್ಳಕ್ಕಿಗಳು ಸಹ ಗ್ರಾಮದಲ್ಲಿ ಸತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಬನ್ನಿಕೋಡು ಗ್ರಾಮದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಸದ್ಯ ಸ್ಥಳಕ್ಕೆ ಜಿಲ್ಲಾ ಪಶು ವೈದ್ಯಾಧಿಕಾರಿ ಡಾ. ಭಾಸ್ಕರ್ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಕೋಳಿಗಳ ಸ್ಯಾಂಪಲ್ನ್ನು ಪರೀಕ್ಷೆಗೆ ಕಳುಹಿಸಿದ್ದು, ಫಲಿತಾಂಶಕ್ಕೆ ಕಾಯುತ್ತಿದ್ದಾರೆ.