ದಾವಣಗೆರೆ: ವಿಷಪೂರಿತ ಆಹಾರ ಸೇವಿಸಿ 60ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಗ್ರಾಮದ ಗಂಗಾಧರಪ್ಪ ಎಂಬುವರ ಮನೆಯಲ್ಲಿ ನಡೆದಿದ್ದ ಸಮಾರಂಭದಲ್ಲಿ ಊಟ ಸೇವಿಸಿದ್ದ 60ಕ್ಕೂ ಹೆಚ್ಚು ಮಂದಿಗೆ ತಡ ರಾತ್ರಿಯಿಂದಲೇ ವಾಂತಿ ಬೇಧಿ ಕಾಣಿಸಿಕೊಂಡಿದೆ. ಅಸ್ವಸ್ಥರನ್ನು ನ್ಯಾಮತಿ ಸರ್ಕಾರಿ ಆಸ್ಪತ್ರೆ ದಾಖಲಿಸಲಾಗಿದೆ. ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.