ETV Bharat / state

ಚಿಕ್ಕಮಗಳೂರು : ಕೆಎಸ್​ಆರ್​ಟಿಸಿ ಬಸ್​ ಮತ್ತು ಕಾರ್​ ಮಧ್ಯೆ ಡಿಕ್ಕಿ.. ತಾಯಿ - ಮಗ ಸಾವು - ಮೂಡಿಗೆರೆ ತಾಲ್ಲೂಕಿನ ಮುದ್ರೆಮನೆ

ಸಾರಿಗೆ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

mother-and-son-died-in-road-accident-at-chikkamagalur
ಚಿಕ್ಕಮಗಳೂರು : ಕೆಎಸ್​ಆರ್​ಟಿಸಿ ಬಸ್​ ಮತ್ತು ಕಾರು ಡಿಕ್ಕಿ : ತಾಯಿ - ಮಗ ಸಾವು
author img

By

Published : Aug 12, 2023, 7:46 PM IST

ಚಿಕ್ಕಮಗಳೂರು : ಕೆಎಸ್​ಆರ್​ಟಿಸಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮುದ್ರೆಮನೆ ಬಳಿ ಶನಿವಾರ ನಡೆದಿದೆ. ಕಾರಿನಲ್ಲಿದ್ದ ಬೆಂಗಳೂರಿನ ಪೂಜಾ ಹಿರೇಮಠ್​(42), ಪುತ್ರ ನಿರಂಜನ್​(12) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಶಿವಯೋಗಯ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಕಲೇಶಪುರದಿಂದ ಮೂಡಿಗೆರೆಗೆ ಬರುತ್ತಿದ್ದ ಸಾರಿಗೆ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರಿನ ಇ ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಶಿವಯೋಗಯ್ಯ ದಂಪತಿ ತೆರಳುತ್ತಿದ್ದರು. ಅಪಘಾತದಲ್ಲಿ ಪತ್ನಿ ಪೂಜಾ ಹೀರೇಮಠ್, ಪುತ್ರ ನಿರಂಜನ್​ ಸ್ಥಳದಲ್ಲೇ ಮೃತಪಟ್ಟಿದ್ದು, ಪತಿ ಶಿವಯೋಗಯ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಮೂಡಿಗೆರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.​

ಕಾರ್ಕಳದ ಜ್ಞಾನ ಸುಧಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ತಮ್ಮ ಹಿರಿಯ ಮಗನನ್ನು ನೋಡಲು ಬಂದು ಬೆಂಗಳೂರಿಗೆ ಹಿಂದಿರುಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಶಿವಯೋಗಯ್ಯ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ಯಾಂಟರ್​ಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್.. ಶುಶ್ರೂಷಕ ಸಾವು : ಮತ್ತೊಂದೆಡೆ ಕ್ಯಾಂಟರ್​ಗೆ ಹಿಂಬದಿಯಿಂದ ಆಂಬ್ಯುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ಆಂಬ್ಯುಲೆನ್ಸ್​ನಲ್ಲಿದ್ದ ಓರ್ವ ಶುಶ್ರೂಷಕ ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ-ಶಿಕಾರಿಪುರ ರಸ್ತೆಯ ಹೊಸಜೋಗ ಬಸ್ ನಿಲ್ದಾಣದ ಬಳಿ ನಡೆದಿದೆ. ಮೃತರನ್ನು ಜಮಖಂಡಿ ಮೂಲದ ವಿಶ್ವನಾಥ್ ಮನಗೂಳಿ (30) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಆಂಬ್ಯುಲೆನ್ಸ್ ಹಾಗು ಕ್ಯಾಂಟರ್ ಚಾಲಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

‌ಮೃತ ವಿಶ್ವನಾಥ್ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಮೂರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಶಿಕಾರಿಪುರದಿಂದ ಶಿವಮೊಗ್ಗದ ಆಸ್ಪತ್ರೆಯೊಂದಕ್ಕೆ ರೋಗಿಯನ್ನು ದಾಖಲಿಸಿ ವಾಪಸ್ ಮರಳುವಾಗ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡ ವಿಶ್ವನಾಥ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನ್ಯಾಮತಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

ಇದನ್ನೂ ಓದಿ : ತುಮಕೂರು : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು.. ಓರ್ವನ ಸ್ಥಿತಿ ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.