ದಾವಣಗೆರೆ: ಕೌಟುಂಬಿಕ ಕಲಹ ಶಂಕೆ ಹಿನ್ನೆಲೆ ಮೂರು ವರ್ಷದ ಮಗುವಿನೊಂದಿಗೆ ತಾಯಿ ನೇಣಿಗೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದಿದೆ. ಹರ್ಷಿತಾ(3), ಚಂದ್ರಮ್ಮ (25) ಆತ್ಮಹತ್ಯೆಗೆ ಶರಣಾದವರು.
ಮೃತರಾದ ಚಂದ್ರಮ್ಮನ ಪತಿ ಮಂಜಪ್ಪ ಡಿ.ಆರ್. ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದು, ಇಂದು ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಬಂದಾಗ ಪತ್ನಿ ಮಗು ಸಹಿತ ನೇಣಿಗೆ ಶರಣಾಗಿರುವುದು ತಿಳಿದುಬಂದಿದೆ. ಪೊಲೀಸ್ ಕಾನ್ಸ್‌ಟೇಬಲ್ ಮಂಜಪ್ಪ ಹಾಗೂ ಪತ್ನಿ ಚಂದ್ರಮ್ಮನ ಮಧ್ಯೆ ಕೆಲ ದಿನಗಳ ಹಿಂದೆ ಜಗಳ ನಡೆದಿತ್ತು ಎನ್ನಲಾಗ್ತಿದೆ. ಇದೇ ಆಕೆಯ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
![mother-commits-suicide](https://etvbharatimages.akamaized.net/etvbharat/prod-images/12341504_tuzas.jpg)
![mother-commits-suicide](https://etvbharatimages.akamaized.net/etvbharat/prod-images/12341504_thuhsdfg.jpg)
ಓದಿ: ದಾವಣಗೆರೆ SP ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿದ ಖದೀಮರು!