ದಾವಣಗೆರೆ: ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ಅನ್ನು ಮಹೇಶ್ ಕುಮಟಳ್ಳಿ ಅವರಿಗೆ ನೀಡಲಾಗಿದೆ. ಆದ್ದರಿಂದ ಲಕ್ಷ್ಮಣ್ ಸವದಿಯವರಿಗೆ ಟಕೆಟ್ ತಪ್ಪಿದೆ. ಬಿಜೆಪಿ ಅವರನ್ನು ಡಿಸಿಎಂ ಮಾಡಿತ್ತು. ಹಾಗೆಯೇ ಮಂತ್ರಿ ಸ್ಥಾನ ಕೂಡ ನೀಡಿತ್ತು. ಅದ್ರೂ ಅವರು ಬೇರೆ ಪಕ್ಷಕ್ಕೆ ಹೋಗಿದ್ದಾರೆ. ಹಾಗೇ ಚುನಾವಣೆಯಲ್ಲಿ ಸಾಕಷ್ಟು ಜನ ಈ ರೀತಿಯಲ್ಲಿ ಬರ್ತಾರೇ ಹೋಗ್ತಾರೆ ಎಂದು ಸಂಸದ ಜಿಎಂ ಸಿದ್ದೇಶ್ವರ್ ಹೇಳಿದರು.
ಹರಪನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಿಕೆಟ್ ಸಿಗುವುದು ಖಚಿತ. ಈಗಾಗಲೇ ಪಕ್ಷದ ವರಿಷ್ಠರು ಜಗದೀಶ್ ಶೆಟ್ಟರ್ ಜೊತೆ ಮಾತಾಡಿದ್ದಾರೆ ಎಂದು ಅವರು, ಲಿಂಗಾಯತರಿಗೆ ಬಿಜೆಪಿಯಲ್ಲಿ ಅಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲಾ. 52 ಜನ ಲಿಂಗಾಯತರಿಗೆ ಟಿಕೆಟ್ ನೀಡಲಾಗಿದೆ. ಅವರಿಗೆ ಕೂಡಾ ಟಿಕೆಟ್ ಕೊಡಲಾಗುವುದು ಎಂದು ಅವರು ಹೇಳಿದರು.
ದಾವಣಗೆರೆಯಲ್ಲಿ ಬಂಡಾಯದ ಬಿಸಿ: ದಾವಣಗೆರೆ ಜಿಲ್ಲೆಯ ದಾವಣಗೆರೆ ದಕ್ಷಿಣ, ದಾವಣಗೆರೆ ಉತ್ತರ, ಮಾಯಕೊಂಡ ಹಾಗೂ ಚನ್ನಗಿರಿ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯದ ಧ್ವನಿ ಕೇಳಿ ಬರುತ್ತಿದೆ. ಹೀಗಾಗಿ ಈ ಕ್ಷೇತ್ರದ ಪ್ರಮುಖರನ್ನು ಕರೆಯಿಸಿ ಮಾತಾಡಲಾಗುವುದು. ಚನ್ನಗಿರಿ ಕ್ಷೇತ್ರದ ವಿಚಾರವಾಗಿ ಈಗಾಗಲೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಿರಿಯ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಜೊತೆ ಮಾತಾಡಿದ್ದಾರೆ ಎಂದು ಸಂಸದ ಸಿದ್ದೇಶ್ವರ್ ತಿಳಿಸಿದರು.
ಇದನ್ನೂ ಓದಿ: ದ.ಕನ್ನಡ ಜಿಲ್ಲೆಯ 2 ಕ್ಷೇತ್ರಗಳಿಗೆ ಕೈ ಅಭ್ಯರ್ಥಿಗಳ ಘೋಷಣೆ: ಕುತೂಹಲ ಕೆರಳಿಸಿದ ಮಂಗಳೂರು ಉತ್ತರ ಕ್ಷೇತ್ರ ಟಿಕೆಟ್
ನಾಮಪತ್ರ ಸಲ್ಲಿಸಿದ ಕರುಣಾಕರ ರೆಡ್ಡಿ: ಮಾಜಿ ಸಚಿವ ಕರುಣಾಕರ ರೆಡ್ಡಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಅವರು ೨೦ ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಅವರ ಕ್ಷೇತ್ರದಲ್ಲಿ ರಾಜ್ಯ ಕೇಂದ್ರ ನಾಯಕರು ಪ್ರಚಾರ ಮಾಡಲಿದ್ದಾರೆ ಎಂದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಅದ್ಧೂರಿ ಮೆರವಣಿಗೆ: ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮತ್ತೊಮ್ಮೆ ಕರುಣಾಕರ ರೆಡ್ಡಿಗೆ ಟಿಕೆಟ್ ಬಿಜೆಪಿ ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಇಂದು ಮಾಜಿ ಸಚಿವರ ತಮ್ಮ ಕ್ಷೇತ್ರದಲ್ಲಿ ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದರು. ಸಂಸದ ಜಿ ಎಂ ಸಿದ್ದೇಶ್ವರ್ ಅವರು ಕರುಣಾಕರ ರೆಡ್ಡಿಗೆ ಸಾಥ್ ನೀಡಿದರು.
ಹರಪನಹಳ್ಳಿ ನಗರದ ಕೋಟೆ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ಮೆರವಣಿಗೆಯಲ್ಲಿ ಆಗಮಿಸಿದ ಕರುಣಾಕರ ರೆಡ್ಡಿಯವರು ತಾಲೂಕು ಕಚೇರಿಗೆ ಭೇಟಿ ನೀಡಿ, ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 2008ರಲ್ಲಿ ನಾಮಪತ್ರ ಸಲ್ಲಿಸಿದ್ದೆ. ಇದೀಗ ಮತ್ತೇ ನಾಮಪತ್ರ ಸಲ್ಲಿಸಿದ್ದೇನೆ. ಈ ತಾಲೂಕು ನಂಜುಂಡಪ್ಪ ವರದಿ ಹಿನ್ನೆಲೆಯಲ್ಲಿ ಬಹಳ ಹಿಂದೆ ಉಳಿದಿರುವ ತಾಲೂಕು, ಇಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಒತ್ತು ಕೊಡಲಾಗುವುದು. ಬೇರೆ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವುದು ನನ್ನ ಗುರಿ. ಈಗಾಗಲೇ ಸಾಕಷ್ಟು ಅಭಿವೃದ್ಧಿ ಮಾಡಲು ಟೆಂಡರ್ ಆಗಿದೆ. ಚುನಾವಣೆ ಮುಗಿದ ಬಳಿಕ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡುತ್ತೇನೆ. ಪ್ರಚಾರಕ್ಕೆ ಅಮಿತ್ ಶಾ ಅವರನ್ನು ಕರೆಸುವ ಪ್ರಯತ್ನ ಮಾಡುವೆ. ಬಿಎಸ್ವೈ ಬರುವವರಿದ್ದಾರೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಬಿಜೆಪಿ ಲಿಂಗಾಯತ ನಾಯಕರನ್ನು ಟಾರ್ಗೆಟ್ ಮಾಡ್ತಿದೆ : ಎಂ.ಬಿ. ಪಾಟೀಲ್