ETV Bharat / state

ತುಂಗಾ ಕಾಲುವೆಗೆ ಬಿದ್ದ ಕಾರಿನಲ್ಲಿ ಅಣ್ಣನ ಮಗನ ಶವ ಪತ್ತೆ.. ಮುಗಿಲು ಮುಟ್ಟಿದ ರೇಣುಕಾಚಾರ್ಯ ಆಕ್ರಂದನ - ಮುಗಿಲು ಮುಟ್ಟಿದ ರೇಣುಕಾಚಾರ್ಯ ಆಕ್ರಂದನ

ಶಾಸಕ ಎಂ ಪಿ ರೇಣುಕಾಚಾರ್ಯ ಅವರ ಅಣ್ಣನ ಮಗನ ಶವ ಸೊರಟೂರು ಬಳಿ ಇರುವ ತುಂಗಾ ಕಾಲುವೆಯಲ್ಲಿ ಪತ್ತೆಯಾಗಿದೆ.

mp renukacharya brother son missing case
ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ ಪ್ರಕರಣ
author img

By

Published : Nov 3, 2022, 4:52 PM IST

Updated : Nov 3, 2022, 7:07 PM IST

ದಾವಣಗೆರೆ: ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್​ ನಾಪತ್ತೆ, ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ. ಹೊನ್ನಾಳಿ ಬಳಿ ತುಂಗಾ ಚಾನಲ್​ನಲ್ಲಿ ಚಂದ್ರಶೇಖರ್​ ಅವರ ಕಾರು ಪತ್ತೆಯಾಗಿದೆ. ಪತ್ತೆಯಾಗಿರುವ ಕಾರಿನಲ್ಲಿ ನಾಪತ್ತೆಯಾಗಿದ್ದ ಚಂದ್ರಶೇಖರ್​ ಅವರು ಶವವಾಗಿ ಪತ್ತೆಯಾಗಿದ್ದಾರೆ. ಈ ಮೂಲಕ ಕಾರು ರೇಣುಕಾಚಾರ್ಯ ಕುಟುಂಬದವರದ್ದೇ ಎಂಬುದು ಸ್ಪಷ್ಟವಾಗಿದೆ.

ಸೊರಟೂರು ಬಳಿ ಇರುವ ತುಂಗಾ ಕಾಲುವೆಯಲ್ಲಿ ಕಾರು ಬಿದ್ದಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗಮಧ್ಯೆ ಇರುವ ತುಂಗಾ ಕಾಲುವೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾರನ್ನು ಮೇಲಕ್ಕೆ ಎತ್ತಿದ್ದಾರೆ. ಈ ಕಾರು ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಅವರದ್ದು ಎಂದು ಪೊಲೀಸ್​ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ತುಂಗ ಚಾನಲ್​ನಲ್ಲಿ ಪತ್ತೆಯಾದ ರೇಣುಕಾಚಾರ್ಯ ಸಹೋದರನ ಮಗನ ಮೃತದೇಹ

ಕಾರಿನಲ್ಲಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್​ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಶಾಸಕ ರೇಣುಕಾಚಾರ್ಯ ಹಾಗೂ ಕುಟುಂಬಸ್ಥರು ದೌಡಾಯಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳದಲ್ಲಿ ಜನಸಾಗರವೇ ಸೇರಿದ್ದು, ರೇಣುಕಾಚಾರ್ಯ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ.

ಕಾಲುವೆಗೆ ಕಾರು ಸಮೇತ ಚಂದ್ರಶೇಖರ್ ಬಿದ್ದು ಐದು ದಿನ ಕಳೆದಿವೆ. ಈ ಹಿನ್ನೆಲೆ ಮೃತದೇಹ ಕೊಳೆತ ಸ್ಥಿತಿಯಲ್ಲಿದೆ. ಚಂದ್ರಶೇಖರ್ ಮೃತದೇಹ ಕಾರಿನ ಹಿಂಬದಿ ಸೀಟ್​ನಲ್ಲಿ ಪತ್ತೆಯಾದ ಹಿನ್ನೆಲೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಇದು ಅಪಘಾತವೋ, ಕೊಲೆಯೋ ಎಂಬುದು ಸಂಪೂರ್ಣ ತನಿಖೆ ಬಳಿಕವಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ: ಗಂಡ ಹೆಂಡ್ತಿ ಜಗಳದಲ್ಲಿ ಮೂರು ವರ್ಷದ ಮಗು ಸಾವು: ದಂಪತಿ ಸೇರಿ ನಾಲ್ವರಿಗೆ ಗಾಯ

Last Updated : Nov 3, 2022, 7:07 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.