ETV Bharat / state

ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ಗೊಂದಲದಿಂದ ದೊಡ್ಡಪೆಟ್ಟು ಬಿದ್ದಿದೆ: ಎಂ ಪಿ ರೇಣುಕಾಚಾರ್ಯ - ಈಟಿವಿ ಭಾರತ್​ ಕನ್ನಡ ನ್ಯೂಸ್

ರಾಜ್ಯದಲ್ಲಿ ಬಿಜೆಪಿ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಹೇಳಿದರು.

ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ
ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ
author img

By

Published : May 15, 2023, 6:19 PM IST

ಬಿಜೆಪಿ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ- ರೇಣುಕಾಚಾರ್ಯ

ದಾವಣಗೆರೆ : 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಸಿಗದೆ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬ ಕನಸು ನುಚ್ಚು ನೂರಾಗಿದೆ. ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಪಕ್ಷ ಸೋತಿರುವುದಕ್ಕೆ ನಾನಾ ರೀತಿಯ ಕಾರಣಗಳನ್ನು ನೀಡುತ್ತಿದ್ದಾರೆ. ಇದೀಗ ಹೊನ್ನಾಳಿ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಬಿಜೆಪಿ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ಗೊಂದಲದಿಂದ ಬಿಜೆಪಿಗೆ ದೊಡ್ಡಪೆಟ್ಟು ಬಿದ್ದಿದೆ ಎಂದು ತಿಳಿಸಿದರು.

ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಸೋಲೇ ಗೆಲುವಿನ ಮೆಟ್ಟಿಲು. ಕಾಂಗ್ರೆಸ್​ ಹಸಿಸುಳ್ಳು ಹೇಳಿ, ಸುಳ್ಳು ಗ್ಯಾರೆಂಟಿ ಭರವಸೆಗಳನ್ನು ರಾಜ್ಯದ ಜನತೆಗೆ ಕೊಟ್ಟು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್​ನವರು ಯಾವ ರೀತಿ ಸರ್ಕಾರ ನಡೆಸುತ್ತಾರೆ ಎಂಬುದನ್ನು ಕಾದು ನೋಡೋಣ ಎಂದರು.

ಇದನ್ನೂ ಓದಿ : ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು: ಯಾರಿಗೆ ಸಿಗಲಿದೆ ಸಚಿವ ಸ್ಥಾನದ ಪಟ್ಟ?

ರಾಜ್ಯ ಸರ್ಕಾರದ ಕೆಲವೊಂದು ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ವಿಚಾರದಲ್ಲಿ ಮಾಡಿಕೊಂಡ ಗೊಂದಲಗಳಿಂದ ಬಿಜೆಪಿಗೆ ಸೋಲಿನ ಅಘಾತವಾಗಿದೆ. ಉತ್ತಮ ಪ್ರಣಾಳಿಕೆ ನಮ್ಮದಿದ್ದರೂ ತಡವಾಗಿ ಬಿಡುಗಡೆ ಮಾಡಲಾಯಿತು. ಆದರೆ ಕಾಂಗ್ರೆಸ್​ ನಾಯಕರು​ ಎರಡು ತಿಂಗಳು ಮುಂಚೆಯೇ ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ ಸುಳ್ಳು ಗ್ಯಾರಂಟಿ ಕಾರ್ಡ್​ಗಳನ್ನು ನೀಡಿದರು. ಇದರಿಂದ ನಮಗೆ ಹಿನ್ನಡೆಯಾಯಿತು ಎಂದು ಎಂ ಪಿ ರೇಣುಕಾಚಾರ್ಯ ಅವರು ಹೇಳಿದರು.

ಇದನ್ನೂ ಓದಿ : ದಿಲ್ಲಿಯತ್ತ ಕೈ ನಾಯಕರು: ಮಹಾನಗರದಲ್ಲಿ ಸಿದ್ದು, ಡಿಕೆಶಿ ಮನೆ ಮುಂದೆ ಅಭಿಮಾನಿಗಳ ದಂಡು

ಜೊತೆಗೆ ಎನ್​ಪಿಎಸ್, ಒಪಿಎಸ್ ಕಮಿಟಿ ಮಾಡಿ ಎಂದು ಪಕ್ಷದ ವರಿಷ್ಠರ ಬಳಿ ಹೇಳಿದ್ದೆವು. ಇದನ್ನು ಮಾಡಲಿಲ್ಲ, ಎನ್​ಪಿಎಸ್ ನೌಕರರಿಂದ ಹಿನ್ನಡೆಯಾಯಿತು. ಬಹಳ ಮುಖ್ಯವಾದ ಇನ್ನೊಂದು ಮುಖ್ಯ ಕಾರಣ ಹಿರಿಯ ಮುಖಂಡರಾದ ಮಾಜಿ ಸಿಎಂಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತು ಮಾಜಿ ಸಚಿವರಾದ ಈಶ್ವರಪ್ಪ, ಲಕ್ಷ್ಮಣ್​ ಸವದಿ ಅವರನ್ನು ಕಡೆಗಣಿಸಿದ್ದಾರೆಂದು ತಪ್ಪು ಸಂದೇಶ ರವಾನಿಸಿ ಅದನ್ನು ಮತಗಳಾಗಿ ಪರಿವರ್ತನೆ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ಎಂ ಪಿ ರೇಣುಕಾಚಾರ್ಯ ಅವರು ಆರೋಪ ಮಾಡಿದರು.

ರಾಜ್ಯದಲ್ಲಿ ಬಿಜೆಪಿ ಸೋತಿರುವ ಬಗ್ಗೆ ಯಾರನ್ನು ದೂಷಿಸುವುದಿಲ್ಲ. ಅವಳಿ ತಾಲೂಕಿನ ಜನರು 75 ಸಾವಿರ ಮತ ಹಾಕಿದ್ದು ನಾನು ಅವರಿಗೆ ಚಿರ ಋಣಿಯಾಗಿದ್ದೇನೆ. ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿಗೆಡುವುದು ಬೇಡ. ಇದನ್ನು ಸವಾಲಾಗಿ ಸ್ವೀಕರಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಪಕ್ಷವನ್ನು ಸಂಘಟನೆ ಮಾಡಿ ಅಧಿಕಾರಕ್ಕೆ ತರೋಣ ಎಂದು ಎಂ ಪಿ ರೇಣುಕಾಚಾರ್ಯ ಅವರು, ತಮ್ಮ ಕಾರ್ಯಕರ್ತರಿಗೆ ಸಂದೇಶ ರವಾನಿಸಿದರು.

ಇದನ್ನೂ ಓದಿ : ಹೈಕಮಾಂಡ್​ ಮುಂದೆ ಸಿಎಂ ಸ್ಥಾನದ ಆಯ್ಕೆ ಸವಾಲು: ಸಿದ್ದು- ಡಿಕೆ ಪ್ರಸ್ತಾಪಗಳೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.