ETV Bharat / state

ಯಡಿಯೂರಪ್ಪರಂತೆ ಜಾತ್ಯತೀತ, ಸಮರ್ಥ ನಾಯಕ ಬೇಕಿದೆ: ಎಂ.ಪಿ.ರೇಣುಕಾಚಾರ್ಯ - ಹಾಲಿ ಸಂಸದ ಜಿ ಎಂ ಸಿದ್ದೇಶ್ವರ್

ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಲೋಕಸಭೆ ಚುನಾವಣೆಗೆ ಹೋಗುವುದು ಸೂಕ್ತ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ
ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ
author img

By ETV Bharat Karnataka Team

Published : Oct 24, 2023, 4:03 PM IST

Updated : Oct 24, 2023, 6:46 PM IST

ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಹೇಳಿಕೆ

ದಾವಣಗೆರೆ: ಓಡಾಟ ನನಗೆ ಹೊಸದಲ್ಲ. ಇಡೀ ರಾಜ್ಯಾದ್ಯಂತ ನಾನು ಪ್ರವಾಸ ಮಾಡ್ತಿದ್ದೇನೆ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯಿಸಿದರು. ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡುವ ವಿಚಾರವಾಗಿ ಮಾತನಾಡಿ, ಹೈಕಮಾಂಡ್ ಏನು ತೀರ್ಮಾನ ಮಾಡುತ್ತೆ ಕಾದು ನೋಡೋಣ. ಒಟ್ಟಾರೆ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು. ರಾಜ್ಯದಲ್ಲಿ ಯಡಿಯೂರಪ್ಪ ಪಕ್ಷವನ್ನು ಕಟ್ಟಿ ಬೆಳೆಸಿದವರು. ಅವರಂತೆ ಜಾತ್ಯತೀತ, ಸಮರ್ಥ ನಾಯಕ ಬೇಕಾಗಿದೆ ಎಂದರು.

ಯಡಿಯೂರಪ್ಪ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಹೋಗುವುದು ಸೂಕ್ತ. ವಿಜಯದಶಮಿ ದಿನ ಈ ಮಾತು ಹೇಳ್ತಿದ್ದೇನೆ. ಅವರು ಹೊರಟರೆ ಲಕ್ಷಾಂತರ ಕಾರ್ಯಕರ್ತರು ಹಿಂದೆ ನಿಲ್ಲುತ್ತಾರೆ. ನಾನೂ ಸಹ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೆ. ಪಕ್ಷ ಸಂಘಟನೆ ಬೂತ್ ಮಟ್ಟದಿಂದ ಆಗಬೇಕು. ಬಿಜೆಪಿಯಲ್ಲಿ ಸರ್ವಾಧಿಕಾರಿ ಧೋರಣೆ ಹೋಗಬೇಕು. ಮೊನ್ನೆ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲಾಯಿತು. ಹಳಬರ ಕಾಲು ಏನಾದ್ರೂ ಬಿದ್ದು ಹೋಗಿದ್ವಾ. ಒಳಮೀಸಲಾತಿ ಅವಶ್ಯಕತೆ ಏನಿತ್ತು?. ಎಲ್ಲವನ್ನೂ ವರ್ಷಕ್ಕೆ ಮುನ್ನ ಹೇಳಬೇಕಿತ್ತು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಆಗಬೇಕಿತ್ತು. ಚುನಾವಣೆಗೆ ಒಂದು ವಾರ ಇದ್ದಾಗ ಈ ರೀತಿ ಮಾಡಿದ್ರು. ಬಿಎಸ್​ವೈ ಎಲ್ಲ ಸಮುದಾಯದವರಿಗೆ ಅವಕಾಶ ಕೊಟ್ಟರು ಎಂದು ಹೇಳಿದರು.

ಯಾರೇ ಪಕ್ಷ ಬಿಡಲಿ, ಬರಲಿ. ನಾನು ಗೆದ್ದೇ ಗೆಲ್ಲುವೆ ಎಂಬ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿಕೆಗೆ, ಅವರ ಬಗ್ಗೆ ನನಗೆ ಗೌರವವಿದೆ. ಅವರಿಗಿಂತ ನಾನು ಪಕ್ಷದಲ್ಲಿ ಸೀನಿಯರ್. ಅವರು ವಯಸ್ಸಿನಲ್ಲಿ ಸೀನಿಯರ್ ಆಗಿರಬಹುದು. ಪಕ್ಷಕ್ಕಾಗಿ ಎರಡು ಬಾರಿ ಜೈಲಿಗೆ ಹೋಗಿ ಬಂದೆ. ನನ್ನ ರಕ್ತದ ಪ್ರತಿ ಕಣದಲ್ಲೂ ಹಿಂದತ್ವ ಇದೆ. ರೇಣುಕಾಚಾರ್ಯ ಮಾತನಾಡಿದ್ರೆ ಪಕ್ಷ ದ್ರೋಹ, ಕೆಲವರು ಮಾತನಾಡಿದ್ದು ಪಕ್ಷ ದ್ರೋಹ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಮಾಜಿ ಶಾಸಕರು ನನಗೆ ಫೋನ್ ಮಾಡಿ ಪಕ್ಷ ಬಿಡುವ ಬಗ್ಗೆ ಮಾತನಾಡಿದರು. ಆದರೆ ನಾನು ಪಕ್ಷ ತೊರೆಯಲ್ಲ ಎಂದು ರೇಣುಕಾಚಾರ್ಯ (ಅಕ್ಟೋಬರ್ 18-2023) ಹೇಳಿದ್ದರು. ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ಪಕ್ಷಕ್ಕೆ ಸಮರ್ಥ ನಾಯಕತ್ವ ಬೇಕು, ನಮಗೆ ಅಭದ್ರತೆ ಕಾಡ್ತಿದೆ ಎಂದು ಮಾಜಿ ಶಾಸಕರು, ಮುಖಂಡರು ದೂರವಾಣಿ ಕರೆ ಮಾಡಿ ಪಕ್ಷ ಬಿಡುವ ಕುರಿತು ಹೇಳಿದರು ಎಂದು ತಿಳಿಸಿದ್ದರು.

ಇದನ್ನೂ ಓದಿ: ಬಿಜೆಪಿ ಮಾಜಿ ಶಾಸಕರು ನನಗೆ ಕರೆ ಮಾಡಿ ಪಕ್ಷ ತೊರೆಯುವ ಬಗ್ಗೆ ಮಾತನಾಡಿದ್ದಾರೆ: ಎಂ.ಪಿ.ರೇಣುಕಾಚಾರ್ಯ

Last Updated : Oct 24, 2023, 6:46 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.