ದಾವಣಗೆರೆ: ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಬಡವರು, ನಿರ್ಗತಿಕರು ಹಾಗೂ ಕಾರ್ಮಿಕರಿಗೆ ಸಂಸದ ಜಿ.ಎಂ.ಸಿದ್ದೇಶ್ವರ್ ಆಹಾರ ಪದಾರ್ಥಗಳ ಕಿಟ್ಗಳನ್ನು ವಿತರಣೆ ಮಾಡಿದರು.
ನಗರದ 19ನೇ ವಾರ್ಡ್ನ ಶೇಖರಪ್ಪ ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ನೇತೃತ್ವದಲ್ಲಿ ಆಹಾರ ಧಾನ್ಯದ ಕಿಟ್ಗಳನ್ನು ಜಗಳೂರು ಶಾಸಕ ಎಸ್.ವಿ.ರಾಮಚಂದ್ರ, ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್, ದೂಡಾ ಅಧ್ಯಕ್ಷ ಶಿವಕುಮಾರ್ ವಿತರಿಸಿದರು.
ಕಿಟ್ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ದೌಡಾಯಿಸಿದ್ದರು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಪೊಲೀಸರು ಮನವಿ ಮಾಡಿದರು. ಆದರೂ ಕೇಳಲಿಲ್ಲ. ಬಳಿಕ ಮನೆ ಮನೆಗೆ ತಲುಪಿಸುವುದಾಗಿ ಹೇಳಿದ ಮೇಲೆ ಮಹಿಳೆಯರು ತೆರಳಿದರು.