ದಾವಣಗೆರೆ: ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಭಾಷಣದ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರದುರ್ಗದ ಶ್ರೀ ಮುರುಘಾಮಠ ಬಸವಕೇಂದ್ರದ ಡಾ. ಶಿವಮೂರ್ತಿ ಮುರುಘಾ ಶರಣರು, ಇದು ತಪ್ಪು ಅಂತಾನೂ ಹೇಳಲ್ಲ, ಸರಿ ಎಂದೂ ಒಪ್ಪಲ್ಲ ಅಂದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಮಠದಲ್ಲಿ ರಾಜಕೀಯ ಮಾತನಾಡುವುದು ಅವರವರ ವಿವೇಚನೆಗೆ ಬಿಟ್ಟದ್ದು. ಈ ಬಗ್ಗೆ ಕೆದಕಬಾರದು, ಕೆಣಕಲೂ ಹೋಗದಿರುವುದೇ ಸೂಕ್ತ ಎಂದು ಅಭಿಪ್ರಾಯಪಟ್ಟರು.
ಒಂದು ತಪ್ಪನ್ನು ನಾವು ನೋಡಲು ಹೋಗಿ ಮತ್ತೊಂದು ತಪ್ಪು ಆಗಬಾರದು ಎಂದು ಮಾರ್ಮಿಕವಾಗಿ ಹೇಳಿದ ಶ್ರೀಗಳು, ಬವವಕೇಂದ್ರದ ಧಾರ್ಮಿಕ ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವ ಅವಶ್ಯಕತೆ ಏನಿತ್ತು ಎಂಬ ಪ್ರಶ್ನೆ ಜೊತೆಗೆ ಆರೋಪವೂ ಬರುತ್ತೆ. ಹಾಗಾಗಿ ಈ ಬಗ್ಗೆ ಪ್ರತಿಕ್ರಿಯಿಸಲು ಹೋಗುವುದಿಲ್ಲ ಎಂದು ಹೇಳಿದರು.