ದಾವಣಗೆರೆ: ರಾಣೆಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡರ ಮನೆ ಮೇಲೆ ನಡೆದದ್ದು ಐಟಿ ದಾಳಿ ಅಲ್ಲ, ಇದರಲ್ಲಿ ನನ್ನ ಪಾತ್ರವೇನು ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳ ಜೊತೆ ಚುನಾವಣಾಧಿಕಾರಿಗಳು ನಡೆಸಿದ ದಾಳಿ ಇದು. ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಾಳೆ ಚುನಾವಣೆ ನಡೆಯಲಿದ್ದು, 15ಕ್ಕೆ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ. ಜನರಲ್ಲಿ ಬಿಜೆಪಿ ಬಗ್ಗೆಯೇ ಹೆಚ್ಚಿನ ಒಲವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.