ದಾವಣಗೆರೆ : ಮೂರನೇ ಅಲೆ ತೆಡೆಗಟ್ಟಲು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಹಿಸಿದೆ. ದಾವಣಗೆರೆಯಲ್ಲಿ ಇವತ್ತಿನಿಂದ ನೈಟ್ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.
![night curfew imposed in davanagere](https://etvbharatimages.akamaized.net/etvbharat/prod-images/12659087_one.jpg)
ರಾತ್ರಿ 10 ರಿಂದ ಬೆಳಗ್ಗೆ 5ಗಂಟೆಯವರೆಗೂ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದಿನಿಂದ 16ರವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಮುಜರಾಯಿ ಹಾಗೂ ಖಾಸಗಿ ದೇವಸ್ಥಾನಗಳಲ್ಲಿ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪ್ರಸಾದ, ತೀರ್ಥ, ಮುಡಿ, ಸೇವೆ ದಾಸೋಹಗಳಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
![night curfew imposed in davanagere](https://etvbharatimages.akamaized.net/etvbharat/prod-images/12659087_two.jpg)
ದೇವಸ್ಥಾನಗಳಲ್ಲಿ ಇಂದಿನಿಂದ 31ರವರೆಗೂ ಅನ್ವಯವಾಗುವಾಗುವಂತೆ ಈ ಆದೇಶ ಹೊರಡಿಸಲಾಗಿದೆ. ದೇವಾಲಯಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಅಗತ್ಯ ಕೋವಿಡ್ ನಿಯಮಾವಳಿ ಪಾಲನೆ ಮಾಡುವಂತೆ ಸೂಚಿಸಲಾಗಿದೆ. ಶನಿವಾರ ಹಾಗೂ ಭಾನುವಾರ ಕೇವಲ ಅರ್ಚಕರಿಗೆ ಪೂಜೆಗೆ ಮಾತ್ರ ಅವಕಾಶ ನೀಡಲಾಗಿದೆ.
ಈ ಎರಡು ದಿನ ಭಕ್ತರ ದರ್ಶನಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಉಳಿದ ಐದು ದಿನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ಆದೇಶ ಉಲ್ಲಂಘನೆ ಮಾಡಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ರಿಸಲ್ಟ್ ರಿಜೆಕ್ಟ್ ಮಾಡಿ ಮತ್ತೆ ಪಿಯುಸಿ ಪರೀಕ್ಷೆ ಬರೆಯಲು ಮುಂದಾದ ವಿದ್ಯಾರ್ಥಿಗಳು