ದಾವಣಗೆರೆ: ನಾನು ಯಡಿಯೂರಪ್ಪ ಪಟ್ಟ ಶಿಷ್ಯ, ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗೋದಿಲ್ಲ ಎಂದು ಸಂಸದ ಜಿಎಂ ಸಿದ್ದೇಶ್ವರ್ ಬಿಎಸ್ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ್ದಾರೆ.
ಹರಿಹರದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಶಂಕುಸ್ಥಾಪನೆ ನಂತರ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ದಕ್ಷ ಆಡಳಿತ ನಡೆಸುತ್ತಿದ್ದಾರೆ. ಕೇವಲ ಊಹಾಪೋಹಗಳಿಗೆ ಯಾರು ತಲೆಕೆಡಿಸಿಕೊಳ್ಳುವಂತಿಲ್ಲ. ಶಿಸ್ತು ಮೀರಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ವರಿಷ್ಠರಿದ್ದಾರೆ. ಯಡಿಯೂರಪ್ಪ ಬಿಟ್ಟು ರಾಜ್ಯದಲ್ಲಿ ಸಮರ್ಥ ನಾಯಕ ಬೇರೆ ಯಾರೂ ಇಲ್ಲ ಎಂದರು.
ಇನ್ನೂ ಸಚಿವ ಭೈರತಿ ಬಸವರಾಜ್ ಮಾತನಾಡಿ, ಬಿವೈ ವಿಜಯೇಂದ್ರ ದೆಹಲಿಗೆ ಯಾವ ಕಾರಣಕ್ಕೆ ಹೋಗಿದ್ದಾರೋ ಗೊತ್ತಿಲ್ಲ, ಅವರ ವೈಯಕ್ತಿಕ ಕೆಲಸಕ್ಕಾಗಿ ಹೋಗಿರಬಹುದು. ನನಗೂ ಮಾಧ್ಯಮಗಳಿಂದ ಗೊತ್ತಾಯಿತು. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ. ಬಿಎಸ್ವೈ ಸಿಎಂ ಆಗಿ ಮುಂದುವರೆಯುತ್ತಾರೆ. ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಸುತ್ತೇವೆ ಎಂದಿದ್ದಾರೆ.