ದಾವಣಗೆರೆಯಲ್ಲಿ ಯಾವುದೆ ಕೊರೊನೊ ಪಾಸಿಟಿವ್ ಪ್ರಕರಣ ಇಲ್ಲ: ಡಿಸಿ ಸ್ಪಷ್ಟನೆ - corona effect in Davanagere
ಕೆಲವು ಮಾಧ್ಯಮಗಳು ಜಿಲ್ಲೆಯಲ್ಲಿ ಕೊರೊನ ಶಂಕಿತರು ಇದ್ದಾರೆ ಎಂಬ ವರದಿಗೆ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಯಾವುದೆ ಕೊರೊನೊ ಪಾಸಿಟಿವ್ ಪ್ರಕರಣ ಇಲ್ಲ
ದಾವಣಗೆರೆ: ಜಿಲ್ಲೆಯಲ್ಲಿ ಯಾವುದೇ ಕೊರೊನ ಪ್ರಕರಣ ದೃಢಪಟ್ಟಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಸ್ಪಷ್ಟಪಡಿಸಿದ್ದಾರೆ. ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಸಿ, ಕೆಲವು ಮಾಧ್ಯಮಗಳಲ್ಲಿ ಜಿಲ್ಲೆಯಲ್ಲಿ ಕೊರೊನ ಪಾಸಿಟಿವ್ ವರದಿಯಾಗಿದೆ ಎಂದು ಪ್ರಸಾರವಾಗುತ್ತಿದ್ದು, ಇದು ಸತ್ಯಕ್ಕೆ ದೂರವಾದದ್ದು. ಅಂತಹ ಯಾವುದೇ ಪಾಸಿಟಿವ್ ಪ್ರಕರಣ ದಾಖಲಾಗಿರುವುದಿಲ್ಲ ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಒಂದು ಕೊರೊನ ಪಾಸಿಟಿವ್ ಪ್ರಕರಣ ದಾವಣಗೆರೆ ನಗರದ ಎಸ್ ಎಸ್ ಆಸ್ಪತ್ರೆಯಲ್ಲಿ ದಾಖಲಾಗಿರುತ್ತದೆ. ಸೋಂಕಿತ ಮಹಿಳೆಯಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡು ಬರದೇ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಎಸ್. ಎಸ್ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ಎಸ್. ಎಸ್. ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.