ETV Bharat / state

ಚನ್ನಗಿರಿಯಿಂದ ಮಾಡಾಳು ಮಲ್ಲಿಕಾರ್ಜುನ್‌, ಹೊನ್ನಾಳಿಯಿಂದ ರೇಣುಕಾಚಾರ್ಯ ನಾಮಪತ್ರ

ಹೊನ್ನಾಳಿ ಕ್ಷೇತ್ರದಿಂದ ಮಾಡಾಳು ವಿರೂಪಾಕ್ಷಪ್ಪ ಪುತ್ರ ಮಾಡಾಳು ಮಲ್ಲಿಕಾರ್ಜುನ್​ ನಾಮಪತ್ರ ಸಲ್ಲಿಕೆ ಮಾಡಿದರೆ, ಹೊನ್ನಾಳಿ ಕ್ಷೇತ್ರದಿಂದ ಹಾಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ನಾಮಪತ್ರ ಸಲ್ಲಿಕೆ ಮಾಡಿದರು.

nominations-filed-by-madalu-mallikarjun-and-renukacharya-in-davanagere
ಚನ್ನಗಿರಿ ಕ್ಷೇತ್ರದಿಂದ ಮಾಡಾಳು ಮಲ್ಲಿಕಾರ್ಜುನ್‌, ಹೊನ್ನಾಳಿಯಿಂದ ರೇಣುಕಾಚಾರ್ಯ ನಾಮಪತ್ರ ಸಲ್ಲಿಕೆ
author img

By

Published : Apr 20, 2023, 6:30 PM IST

Updated : Apr 20, 2023, 9:36 PM IST

ಶಾಸಕ ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ : ನಾಮಪತ್ರ ಸಲ್ಲಿಸಲು ಇಂದು ಅಂತಿಮ ದಿನವಾಗಿರುವುದರಿಂದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗು ಚನ್ನಗಿರಿಯ ಪಕ್ಷೇತರ ಅಭ್ಯರ್ಥಿ ಮಾಡಾಳ್ ಮಲ್ಲಿಕಾರ್ಜುನ್‌ ಸೇರಿ ಹಲವರು ನಾಮಪತ್ರ ಸಲ್ಲಿಕೆ ಮಾಡಿದರು. ಬೃಹತ್​ ರೋಡ್ ಶೋ ನಡೆಸುವ ಮೂಲಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮಾಡಾಳು ಮಲ್ಲಿಕಾರ್ಜುನ್‌ ಅವರಿಗೆ ತಂದೆ ಮಾಡಾಳು ವಿರೂಪಾಕ್ಷಪ್ಪ ಸಾಥ್​ ನೀಡಿದರು. ರೇಣುಕಾಚಾರ್ಯ ನಾಮಪತ್ರ ಸಲ್ಲಿಸುವ ಮುನ್ನ, ಹಿರಕಲ್ಮಠದಿಂದ ಬೃಹತ್​ ರೋಡ್​ ಶೋ ನಡೆಸಿ ತಮ್ಮ ಶಕ್ತಿ ಪ್ರದರ್ಶನ ನಡೆಸಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹಾಗು ಚನ್ನಗಿರಿ ಕ್ಷೇತ್ರಗಳು ಹೈವೋಲ್ಟೇಜ್ ಕ್ಷೇತ್ರಗಳಾಗಿ ಪರಿವರ್ತನೆಯಾಗಿವೆ. ಹೊನ್ನಾಳಿಯಿಂದ ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಎಂಪಿ ರೇಣುಕಾಚಾರ್ಯ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಡಿಜಿ ಶಾಂತನ ಗೌಡರು ಸ್ಫರ್ಧೆ ಮಾಡುತ್ತಿದ್ದು ಇಂದು ನಾಮಪತ್ರ ಸಲ್ಲಿಕೆ ಮಾಡಿದರು.

ಚನ್ನಗಿರಿ ಮತಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳು​ ಮಲ್ಲಿಕಾರ್ಜುನ್‌ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧೆ ಮಾಡುತ್ತಿದ್ದಾರೆ. ಚನ್ನಗಿರಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹೆಚ್.ಎಸ್.ಶಿವಕುಮಾರ್ ಹಾಗು ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಗಂಗಾ ಬಸವರಾಜ್ ಅವರು ಕಣಕ್ಕೆ ಇಳಿದಿದ್ದಾರೆ. ದಾವಣಗೆರೆ ಉತ್ತರ ಮತ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ರವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು.

ಮಾಡಾಳು ವಿರೂಪಾಕ್ಷಪ್ಪ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ : ಚನ್ನಗಿರಿಯಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸಿದ್ದ ಹಾಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ನವರಿಗೆ ಲೋಕಾಯುಕ್ತ ಪ್ರಕರಣದಲ್ಲಿ ಸಿಲುಕಿರುವ ಹಿನ್ನಲೆ ಅವರಿಗೆ ಹಾಗು ಅವರ ಹಿರಿಯ ಪುತ್ರ ಮಾಡಾಳು ಮಲ್ಲಿಕಾರ್ಜುನ್‌ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿತ್ತು. ಈ ಬಗ್ಗೆ ಸುಮ್ಮನೆ ಕೂರದ ಮಾಡಾಳ್ ಮಲ್ಲಿಕಾರ್ಜುನ್‌ ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪನವರು ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದರು.

ವೀರಶೈವ ಲಿಂಗಾಯತರು ಸಿಎಂ ಆಗಬೇಕೆಂಬ ಒತ್ತಾಸೆ: ರೇಣುಕಾಚಾರ್ಯ: ವೀರಶೈವ ಲಿಂಗಾಯತರು ಸಿಎಂ ಆಗಬೇಕೆಂಬ ಒತ್ತಾಸೆ ಬಿಜೆಪಿಯಲ್ಲಿದೆ ಎಂದು ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ಕಳೆದ ದಿನ ಬೊಮ್ಮಾಯಿ, ಯಡಿಯೂರಪ್ಪನವರು, ಧರ್ಮೇಂದ್ರ ಪ್ರಧಾನ್ ಹಾಗೂ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಇದರಲ್ಲಿ ವೀರ ಶೈವ ಲಿಂಗಾಯತರು ಸಿಎಂ ಆಗಬೇಕೆಂಬ ಒತ್ತಾಸೆ ಇಡಲಾಗಿದೆ. ಸೂರ್ಯ ಚಂದ್ರರು ಇರುವುದು ಎಷ್ಟೋ ಸತ್ಯವೋ ಅಷ್ಟೇ ಸತ್ಯ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ‌ ಬರುತ್ತದೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬಂತೆ ಬಿಜೆಪಿ ಅಧಿಕಾರ ನೀಡಿದೆ ಎಂದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶೆಟ್ಟರ್ ಅವರು ಪಕ್ಷ ಬಿಡಬಾರದಿತ್ತು. ಅವರು ಜನಸಂಘದಿಂದ ಬಂದವರು. ಜಗದೀಶ್ ಶೆಟ್ಟರ್ ಸ್ವಯಂಕೃತ ಅಪರಾಧ ಮಾಡಿಕೊಂಡಿದ್ದಾರೆ ಎಂದರು. ಲಕ್ಷ್ಮಣ ಸವದಿ ಬಗ್ಗೆ ಪ್ರತಿಕ್ರಿಯಿಸಿ, ಸವದಿ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಲಕ್ಷ್ಮಣ್ ಸವದಿಯನ್ನು ಬೆಳೆಸಿದ್ದು ಬಿಜೆಪಿ ಪಕ್ಷ. ಲಕ್ಷ್ಮಣ್ ಸವದಿ ಅವರನ್ನು ಪಕ್ಷವು ಜೀರೋದಿಂದ ಹೀರೋ ಮಾಡಿದೆ. ಲಕ್ಷ್ಮಣ್ ಹೋಗಿರುವುದರಿಂದ ಪಕ್ಷಕ್ಕೆ ಯಾವುದೇ ನಷ್ಟ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ : ಬೃಹತ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ನಾಮಪತ್ರ ಸಲ್ಲಿಕೆ

Last Updated : Apr 20, 2023, 9:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.