ದಾವಣಗೆರೆ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಇಂದು ತನ್ನ ಆರ್ಭಟ ಮುಂದುವರೆಸಿದ್ದಾನೆ. ಜಿಲ್ಲೆಯಾದ್ಯಂತ ಬೆಳ್ಳಂಬೆಳಗ್ಗೆ ಸುರಿದ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಸತತವಾಗಿ ಮಳೆ ಸುರಿಯುತ್ತಿದ್ದರಿಂದ ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮೂರು ಗಂಟೆಗಳಿಗೂ ಅಧಿಕ ಕಾಲ ಸುರಿದ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಅವಾಂತರ ಸೃಷ್ಟಿಯಾಗಿದೆ.
ಭತ್ತದ ಗದ್ದೆಗಳು ಜಲಾವೃತವಾಗಿದ್ದು, ರೈತರು ಕಂಗಾಲಾಗಿದ್ದಾರೆ. ರಸ್ತೆಗಳು ಮಳೆ ನೀರಿನಿಂದ ಆವೃತವಾಗಿದ್ದು, ಮಕ್ಕಳು ಶಾಲೆಗಳಿಗೆ ತೆರಳಲು ಪರದಾಡಿದರು.
ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ರಣಮಳೆಗೆ 25 ಮಂದಿ ಸಾವು.. 2 ದಿನ ಶಾಲೆಗಳಿಗೆ ರಜೆ ಘೋಷಣೆ