ETV Bharat / state

ದಾವಣಗೆರೆ ವಿವಿ : ವಿದ್ಯಾರ್ಥಿಗಳ ವಿವಿಧ ಬೇಡಿಕೆ ಪೂರೈಸುವಂತೆ ಎನ್​ಎಸ್​ಯುಐ ಪ್ರತಿಭಟನೆ - ದಾವಣಗೆರೆ ವಿವಿ ಆವರಣದಲ್ಲಿ ಪ್ರತಿಭಟನೆ

ವಿದ್ಯಾರ್ಥಿಗಳ ಹಲವು ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಎನ್​ಎಸ್​ಯುಐ ವತಿಯಿಂದ ದಾವಣಗೆರೆ ವಿವಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು

nsui-protest-at-davanagere-university
ದಾವಣಗೆರೆ ವಿವಿ : ವಿದ್ಯಾರ್ಥಿಗಳ ವಿವಿಧ ಬೇಡಿಕೆ ಪೂರೈಸುವಂತೆ ಎನ್​ಎಸ್​ಯುಐ ಪ್ರತಿಭಟನೆ
author img

By

Published : Dec 17, 2022, 7:51 PM IST

ದಾವಣಗೆರೆ ವಿವಿ : ವಿದ್ಯಾರ್ಥಿಗಳ ವಿವಿಧ ಬೇಡಿಕೆ ಪೂರೈಸುವಂತೆ ಎನ್​ಎಸ್​ಯುಐ ಪ್ರತಿಭಟನೆ

ದಾವಣಗೆರೆ: ವಿದ್ಯಾರ್ಥಿಗಳ ಹಲವು ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಎನ್​ಎಸ್​ಯುಐ ವತಿಯಿಂದ ದಾವಣಗೆರೆ ವಿವಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಪ್ರತಿಭಟನಾಕಾರರು ವಿವಿಯ ಮುಖ್ಯದ್ವಾರ ಮುಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಹಲವು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿದರು.

ವಿದ್ಯಾರ್ಥಿಗಳ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯ : ಇನ್ನು ವಿವಿಯ ವಿದ್ಯಾರ್ಥಿ ನಿಲಯದ ಶುಲ್ಕವನ್ನು 860 ರೂ.ನಿಂದ 3000ಕ್ಕೆ ಹೆಚ್ಚಳ ಮಾಡಿರುವುದು ಬಡ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದಲ್ಲದೇ ಎಸ್ಸಿಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ಎರಡು ವರ್ಷದಿಂದ ನೀಡಲಾಗಿಲ್ಲ.

ಆನ್​ಲೈನ್​​ನಲ್ಲೇ ಹಾಜರಾತಿ ಹಾಕುವಂತಹ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಇದರಿಂದ ಬಡ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಅಲ್ಲದೇ ವಿವಿಯಲ್ಲಿ ಕ್ರೀಡಾಪಟುಗಳಿಗೆ ಕ್ರೀಡೆಗಳಲ್ಲಿ ಭಾಗಿಯಾಗಲು ಪ್ರೋತ್ಸಾಹಿಸುತ್ತಿಲ್ಲ ಎಂದು ಎನ್​ಎಸ್​ಯುಐ ವಿದ್ಯಾರ್ಥಿ ಸಂಘಟನೆಯ ದಾವಣಗೆರೆ ವಿವಿ ಅಧ್ಯಕ್ಷ ಗಿರಿಧರ್ ರವರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕಾಗಮಿಸಿದ ಕುಲಪತಿಗಳಾದ ಬಿಡಿ ಕುಂಬಾರರವರು ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಲು ಇಡೀ ವಿವಿಯ ಕಮಿಟಿಯಲ್ಲಿ ಚರ್ಚಿಸುತ್ತೇವೆ. ವಿದ್ಯಾರ್ಥಿಗಳ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ : ಬೆಂಗಳೂರು ಗ್ರಾಮಾಂತರ: ಕಾಲೇಜು ಬಂದ್​ ಮಾಡಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.