ETV Bharat / state

ರಂಜಾನ್ ದಿನ ಸಾಮೂಹಿಕ ಪ್ರಾರ್ಥನೆ, ಮೆರವಣಿಗೆಗೆ ಅವಕಾಶ ಇಲ್ಲ - ಕೊರೊನಾ ಸೋಂಕು

ರಂಜಾನ್ ಆಚರಣೆ ದಿನವನ್ನು ಮುಸ್ಲಿಂ ಮುಖಂಡರೇ ನಿರ್ಧರಿಸಲಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

Davangere
ರಂಜಾನ್ ಹಬ್ಬದ ದಿನ ಸಾಮೂಹಿಕ ಪ್ರಾರ್ಥನೆ, ಮೆರವಣಿಗೆಗೆ ಅವಕಾಶ ಇಲ್ಲ
author img

By

Published : May 23, 2020, 7:54 PM IST

ದಾವಣಗೆರೆ: ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ರಂಜಾನ್ ಹಬ್ಬದ ದಿನ ಸಾಮೂಹಿಕ ಪ್ರಾರ್ಥನೆ ಹಾಗೂ ಮೆರವಣಿಗೆಗೆ ಅನುಮತಿ ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.

ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ವಕ್ಫ್ ಬೋರ್ಡ್‌ನಿಂದ ನಿಯಮಾವಳಿ ಜಾರಿಗೊಳಿಸಲಾಗಿದೆ. ಮುಸ್ಲಿಂ ಸಮಾಜದ ಮುಖಂಡರ ಸಭೆ ನಡೆಸಿ ಈ ಬಗ್ಗೆ ಅವರಿಗೆ ತಿಳಿವಳಿಕೆ ನೀಡಿದ್ದೇವೆ.‌ ರಂಜಾನ್ ಆಚರಣೆ ದಿನವನ್ನು ಮುಸ್ಲಿಂ ಮುಖಂಡರೇ ನಿರ್ಧರಿಸಲಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ನಾಳೆ ಅಂದರೆ ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಇರಲಿದೆ. ಮೆಡಿಕಲ್ ಶಾಪ್, ಆಸ್ಪತ್ರೆ ಸೇರಿದಂತೆ ಕೆಲವು ಅಗತ್ಯ ವಸ್ತುಗಳ ಮಳಿಗೆಗಳು ಮಾತ್ರ ಕಾರ್ಯ ನಿರ್ವಹಿಸುತ್ತವೆ. ಅನಗತ್ಯವಾಗಿ ಓಡಾಡುವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಈಗಾಗಲೇ ದಾವಣಗೆರೆ ನಗರದಲ್ಲಿ 11 ಕಂಟೇನ್​​​​ಮೆಂಟ್ ಝೋನ್‌ಗಳಿವೆ. ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮವನ್ನೂ ಕಂಟೇನ್ಮೆಂಟ್ ಝೋನ್ ಆಗಿ ಮಾಡಲಾಗಿದೆ. ಈ ಝೋನ್‌ನಲ್ಲಿ ಪ್ರತಿಯೊಬ್ಬರ ತಪಾಸಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.