ETV Bharat / state

ದಾವಣಗೆರೆಯಲ್ಲಿ ಇಂದು ಒಂದು ಕೊರೊನಾ ದೃಢ: ಗುಣಮುಖರಾದ ಆರು ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್

author img

By

Published : Jun 5, 2020, 9:19 PM IST

ಗ್ರೀನ್​ ಝೊನ್​​ನಲ್ಲಿದ್ದ ದಾವಣಗೆರೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಇಂದು ಜಾಲಿನಗರದ ವ್ಯಕ್ತಿಯೋರ್ವನಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ.

Davanagere
ದಾವಣಗೆರೆ

ದಾವಣಗೆರೆ: ಬೆಣ್ಣೆನಗರಿಯಲ್ಲಿ ಇಂದು ಓರ್ವ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 180ಕ್ಕೆ ಏರಿಕೆಯಾಗಿದೆ.

ಜಾಲಿನಗರದ ಕಂಟೈನ್​ಮೆಂಟ್ ಝೋನ್‌ ನಿವಾಸಿಯಾದ 27 ವರ್ಷದ ಪುರುಷನಲ್ಲಿ ಇಂದು ಸೋಂಕು ಕಾಣಿಸಿಕೊಂಡಿದೆ. P-3862 ಸೋಂಕಿತನಿಂದ ಕೊರೊನಾ ತಗುಲಿದೆ ಎಂದು ತಿಳಿದು ಬಂದಿದೆ.

ಕೊರೊನಾ ಸೋಂಕಿಗೆ ತುತ್ತಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಆರು ಮಂದಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಮೂಲಕ 147 ಮಂದಿ ಡಿಸ್ಚಾರ್ಜ್ ಆದಂತಾಗಿದ್ದು, ಇಲ್ಲಿಯವರೆಗೆ ಆರು ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 27 ಸಕ್ರಿಯ ಪ್ರಕರಣಗಳಿದ್ದು, 327 ಸ್ಯಾಂಪಲ್​ಗಳು ನೆಗೆಟಿವ್ ಬಂದಿವೆ.

ಇಂದು ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆಗೆ 343 ಮಾದರಿ ಸಂಗ್ರಹಿಸಲಾಗಿದ್ದು, ಒಟ್ಟು 382 ಸ್ಯಾಂಪಲ್​ಗಳ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.