ETV Bharat / state

ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಿ ಡಿಸಿ ಮಹಾಂತೇಶ್ ಬೀಳಗಿ ಆದೇಶ - ದೀಪಾವಳಿ ಪಟಾಕಿ

ನಿಗದಿಪಡಿಸುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕವಾಗಿ ಹಸಿರು ಪಟಾಕಿ ಅಂಗಡಿಗಳನ್ನು ತೆರೆಯಲು ಅವಕಾಶವಿದೆ. ಮಳಿಗೆಗಳಲ್ಲಿ ಎರಡೂ ಕಡೆಯಿಂದ ಸರಾಗವಾಗಿ ಗಾಳಿಯಾಡುವಂತೆ ಇರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀ. ಅಂತರವಿರಬೇಕು, ಈ ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು..

DC Mahanthesh Beelagi
ಡಿಸಿ ಮಹಾಂತೇಶ್ ಬೀಳಗಿ
author img

By

Published : Nov 10, 2020, 3:27 PM IST

ದಾವಣಗೆರೆ : ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶ ಇದೆ. ಕೋವಿಡ್ ಮಾರ್ಗಸೂಚಿ ಪಾಲಿಸಿ ಹಬ್ಬ ಆಚರಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಆರ್.ಬೀಳಗಿ ಹೇಳಿದ್ದಾರೆ.

ದೀಪಾವಳಿ ಹಬ್ಬವನ್ನು ಜಿಲ್ಲೆಯಲ್ಲಿ ಪಾರಂಪರಿಕವಾಗಿ ಪ್ರತಿ ವರ್ಷವೂ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ದೀಪಾವಳಿ ಹಬ್ಬದಲ್ಲಿ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸುವುದು ಸಾಮಾನ್ಯ. ಆದರೆ, ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುವ ಭೀತಿ ಇದೆ. ಸೋಂಕು ಹೆಚ್ಚಿನ ರೀತಿ ಹರಡದಂತೆ, ಸೋಂಕಿನ ಸರಪಳಿ ಕತ್ತರಿಸಲು ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ.

ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡುವುದಾಗಲಿ, ಬಳಸುವುದಾಗಲಿ ಮಾಡುವಂತಿಲ್ಲ. ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಿಗೆ ಪಡೆದ ಮಾರಾಟಗಾರರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಹಸಿರು ಪಟಾಕಿ ಮಳಿಗೆಗಳನ್ನು ನ.7ರಿಂದ16ರವರೆಗೆ ಮಾತ್ರ ತೆರೆದಿರಬೇಕು.

ನಿಗದಿಪಡಿಸುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕವಾಗಿ ಹಸಿರು ಪಟಾಕಿ ಅಂಗಡಿಗಳನ್ನು ತೆರೆಯಲು ಅವಕಾಶವಿದೆ. ಮಳಿಗೆಗಳಲ್ಲಿ ಎರಡೂ ಕಡೆಯಿಂದ ಸರಾಗವಾಗಿ ಗಾಳಿಯಾಡುವಂತೆ ಇರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀ. ಅಂತರವಿರಬೇಕು, ಈ ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.

ಪ್ರತಿ ಮಳಿಗೆಗಳಲ್ಲಿ ಪರವಾನಿಗೆ ಪತ್ರದ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಅಲ್ಲದೇ ಪರವಾನಿಗೆ ಪತ್ರ ಪಡೆದವರು ಕಡ್ಡಾಯವಾಗಿ ಮಳಿಗೆಯಲ್ಲಿ ಹಾಜರಿರಬೇಕು. ಹಸಿರು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರ ಗುರುತಿಸಿ, ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲರೂ ತಪ್ಪದೆ ಮಾಸ್ಕ್ ಧರಿಸಿರಬೇಕು. ಹಸಿರು ಪಟಾಕಿ ಖರೀದಿ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಮಾರ್ಗಸೂಚಿಗಳನ್ನು ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಆರೋಗ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ತಾಲೂಕು ಆಡಳಿತ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಹಾಗೂ ಸಂಬಂಧಿಸಿದ ಇಲಾಖೆ, ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.