ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ಮದುವೆ ಊಟ ಮಾಡಿದ 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.
ಮದುವೆ ಸಮಾರಂಭದಲ್ಲಿ ಊಟ ಸೇವಿಸಿ ಅಸ್ವಸ್ಥರಾಗಿದ್ದ ಮಂದಿಯನ್ನು ಶಿವಮೊಗ್ಗ ಜಿಲ್ಲೆಯ ಮೆಗ್ಗನ್ ಆಸ್ಪತ್ರೆ, ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನಾ ಸ್ಥಳ ಫಲವನಹಳ್ಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಆಹಾರವನ್ನು ಪರಿಶೀಲಿಸಿದ್ದಾರೆ.