ದಾವಣಗೆರೆ : ಕೊರೊನಾ ವಾರಿಯರ್ಸ್ಗಳಿಗೆ ಬಾಡಿಗೆ ಮನೆಗಳ ಮಾಲೀಕರು ತೊಂದರೆ ನೀಡುತ್ತಿರುವ ಬಗ್ಗೆ ದೂರು ಕೇಳಿ ಬಂದಿದೆ. ಇದು ಮುಂದುವರಿಸಿದರೆ ಮಾಲೀಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸ್ಪಿ ಹನುಮಂತರಾಯ ಎಚ್ಚರಿಕೆ ನೀಡಿದ್ದಾರೆ.
ನಗರದ ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳು, ಹಾಲಿ ವಾಸ ಮಾಡುತ್ತಿರುವ ಡಾಕ್ಟರ್ ಹಾಗೂ ಇತರೆ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮನೆ ಹಾಗೂ ರೂಮ್ ಖಾಲಿ ಮಾಡಿ ಎಂದು ಅನಾವಶ್ಯಕವಾಗಿ ತೊಂದರೆ ಕೊಡುತ್ತಿರುವುದು ಗಮನಕ್ಕೆ ಬಂದಿದೆ.
ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ನಿಯಂತ್ರಿಸಲು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರುಗಳಿಗೆ ಅನಾವಶ್ಯಕ ತೊಂದರೆ ನೀಡುವುದು, ಮನೆ ಹಾಗೂ ರೂಮ್ ಖಾಲಿ ಮಾಡಿ ಎಂದು ತೊಂದರೆ ಕೊಡಬಾರದು ಎಂದು ಹೇಳಿದ್ದಾರೆ.