ದಾವಣಗೆರೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವುದಾಗಿ ಮಾತು ಕೊಟ್ಟು ಪಾಲಿಸದ ಸಿಎಂ ಬಿಎಸ್ವೈ ಸರ್ಕಾರದ ವಿರುದ್ಧ ಕೂಡಲಸಂಗಮದಿಂದ ವಿಧಾನ ಸೌಧದವರೆಗೆ ಪಂಚ ಲಕ್ಷ ಹೆಜ್ಜೆಯೊಂದಿಗೆ ಪಾದಯಾತ್ರೆ ಹಮ್ಮಿಕೊಳ್ಳಲು ಸಮಾಜ ತೀರ್ಮಾನಿಸಿದೆ ಎಂದು ಮುಖಂಡರಾದ ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜ್ಯಯ ಶ್ರೀಗಳು ಮೀಸಲಾತಿ ನೀಡುವಂತೆ ಕಳೆದ ಅಕ್ಟೋಬರ್ 28 ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಇದನ್ನು ಗಮನಿಸಿದ ಸಿಎಂ ಬಿಎಸ್ವೈ, ಸತ್ಯಾಗ್ರಹ ಕೈಬಿಡಲು ಮನವಿ ಮಾಡಿಕೊಂಡು 2 ದಿನದಲ್ಲಿ ಸಿಹಿ ಸುದ್ದಿ ನೀಡುವುದಾಗಿ ತಿಳಿಸಿದ್ದರಂತೆ. ಆದ್ರೆ ಅವರೀಗ ಮಾತು ತಪ್ಪಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಪಾದಯಾತ್ರೆ ಹಮ್ಮಿಕೊಳ್ಳಲು ನಗರದ ಖಾಸಗಿ ಹೋಟೆಲ್ವೊಂದರಲ್ಲಿ ಇದೇ 8 ಕ್ಕೆ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.
ಓದಿ:'ಜಿಎಸ್ಟಿ ಜಾರಿಗೆ ತಂದು ರಾಜ್ಯಗಳನ್ನು ಭಿಕ್ಷುಕ ಸ್ಥಿತಿಯಲ್ಲಿಟ್ಟರು'
ನಂತರ ಮಾತನಾಡಿ, ಈ ಸಭೆಯಲ್ಲಿ ಹಾಲಿ ಮಾಜಿ ಸಚಿವರು, ಜನಪ್ರತಿನಿಧಿಗಳು ಭಾಗಿಯಾಗುವ ಸಾಧ್ಯತೆ ಇದೆ. ಪಾದಯಾತ್ರೆಯ ಸಿದ್ಧತೆ ಬಗ್ಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಭಾಗಿಯಾಗಿ ಸಾಧಕ-ಬಾಧಕಗಳ ಬಗ್ಗೆ ತಿಳಿಸಲಿದ್ದಾರೆ ಎಂದರು.