ದಾವಣಗೆರೆ : ಕೊರೊನಾ ಹಿನ್ನೆಲೆ ಸ್ಥಗಿತಗೊಂಡಿದ್ದ ಐಪಿಎಲ್ -13 ಸೀಸನ್ ಶುರುವಾಗುತ್ತಿರುವುದು ಕ್ರಿಕೆಟ್ ಪ್ರಿಯರ ಸಂತಸ ಹೆಚ್ಚಿಸಿದೆ. ಈ ಬಾರಿಯಾದ್ರೂ ಆರ್‌ಸಿಬಿ (ಬೆಂಗಳೂರು ರಾಯಲ್ ಚಾಲೆಂಜರ್ಸ್) ಕಪ್ ಮುಡಿಗೇರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಅದೇ ರೀತಿ ಇಲ್ಲೊಬ್ಬ ಅಭಿಮಾನಿ ವಿರಾಟ್ ಕೊಹ್ಲಿ ಭಾವಚಿತ್ರವನ್ನು ವಿಶೇಷವಾಗಿ ಬಿಡಿಸಿರುವುದು ಸದ್ಯ ಕ್ರಿಕೆಟ್ ಪ್ರಿಯರ ಮೆಚ್ಚುಗೆಗೆ ಕಾರಣವಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ಯುವಕ ಜೈಕುಮಾರ್ ಆರ್‌ಸಿಬಿ ಗೆದ್ದು ಬರಲು ವಿನೂತನ ರೀತಿ ಶುಭ ಹಾರೈಸಿದ್ದಾರೆ.
ಬ್ಯಾಟ್ ಮೂಲಕ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ನಾಯಕ ವಿರಾಟ್ ಕೊಹ್ಲಿ ಚಿತ್ರ ಬಿಡಿಸಿ, ಈ ಸಾರಿ ಕಪ್ ಗೆಲ್ಲುವಂತೆ ಪ್ರೋತ್ಸಾಯಿಸಿದ್ದಾರೆ. ಸೆಪ್ಟೆಂಬರ್ 19ರಂದು ಐಪಿಎಲ್ 13ನೇ ಆವೃತ್ತಿ ಆರಂಭಗೊಳ್ಳಲಿದೆ. ಈ ಬಾರಿ ಆರ್‌ಸಿಬಿ ಕಪ್ ಗೆಲ್ಲುವ ಫೇವರಿಟ್ ತಂಡ ಎನಿಸಿಕೊಂಡಿದೆ. ಸದ್ಯ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.