ದಾವಣಗೆರೆ: ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಸಾರ್ವಜನಿಕ ಆಸ್ಪತ್ರೆ ಎದುರು ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಮಹೇಶ್-ನೇತ್ರಾವತಿ ದಂಪತಿ ಪುತ್ರ ಮಗ ಭರತ್ (13) ಮೃತ ಬಾಲಕ. ಅನಾರೋಗ್ಯದಿಂದ ಬಳಲುತ್ತಿದ್ದ ಭರತ್ನನ್ನು ಪಾಲಕರು ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದರು. ಕರ್ತವ್ಯದಲ್ಲಿದ್ದ ವೈದ್ಯರು ಸಕಾಲಕ್ಕೆ ಬಾಲಕನಿಗೆ ಚಿಕಿತ್ಸೆ ನೀಡದ ಪರಿಣಾಮ ಮಗ ಸಾವನ್ನಪ್ಪಿದ್ದಾನೆ ಎಂದು ಮೃತ ಬಾಲಕನ ಪೋಷಕರು ಆರೋಪಿಸಿದ್ದಾರೆ. ಸಾರ್ವಜನಿಕರಿಗೆ ಸ್ಪಂದಿಸದ ವೈದ್ಯರ ಅಮಾನತಿಗೆ ನೊಂದ ಪಾಲಕರು ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಚನ್ನಗಿರಿ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.