ದಾವಣಗೆರೆ: ಇಲ್ಲಿನ ಕಕ್ಕರಗೋಳ ಗ್ರಾಮ ಪಂಚಾಯಿತಿ ಪಿಡಿಒ ಲಿಂಗಾಚಾರಿ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಇವರು ಈ ಸ್ವತ್ತು ಮಾಡಿಕೊಡಲು ನಗರದ ಕೊಂಡಜ್ಜಿ ರಸ್ತೆ ಆರ್‌ಟಿಒ ಕಚೇರಿ ಬಳಿ ಮಜುನಾಥ ಎಂಬ ರೈತನಿಂದ 2 ಸಾವಿರ ರೂಪಾಯಿ ಪಡೆದುಕೊಳ್ಳುತ್ತಿದರು. ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ಡಿವೈಎಸ್ಪಿ ರಾಮಕೃಷ್ಣ ಹಾಗೂ ಇನ್ಸ್‌ಪೆಕ್ಟರ್ ಆಂಜನೇಯ ಅವರಿದ್ದ ತಂಡ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ದ್ವಿತೀಯ ದರ್ಜೆ ಸಹಾಯಕ