ದಾವಣಗೆರೆ: ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ಮಸಣಿಕೆರೆ ಗ್ರಾಮದ ಬಳಿ ಶನಿವಾರ ರಾತ್ರಿ ನಡೆದಿದೆ.
ಪೆಟ್ರೋಲ್ ಬಂಕ್ ಉದ್ಯೋಗಿ ನಾಗರಾಜ್ (35) ಮೃತ ವ್ಯಕ್ತಿ. ಅಜ್ಜಂಪುರ ಪೊಲೀಸರು ಅಡಿಕೆ ಕಳ್ಳರನ್ನು ಪತ್ತೆ ಹಚ್ಚಲು ಪೆಟ್ರೋಲ್ ಬಂಕ್ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾಗ, ಅದೇ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್ನನ್ನು ಚಹಾ ತರುವಂತೆ ಕಳುಹಿಸಿದ್ದರು. ನಾಗರಾಜ್ ಚಹಾ ತರಲು ರಸ್ತೆ ದಾಟುವಾಗ ದಾವಣಗೆರೆ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ನಾಗರಾಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಓದಿ : ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಮಹಿಳೆ ಸಾವು
ನಾಗರಾಜ್ ಸಾವಿಗೆ ಆಕ್ರೋಶ ವ್ಯಕ್ತಪಡಿಸಿದ ಮೃತನ ಸಂಬಂಧಿಕರು, ಚನ್ನಗಿರಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ, ಕಾರು ಚಾಲಕನನ್ನು ಬಂಧಿಸುವಂತೆ ಪಟ್ಟು ಹಿಡಿದರು. ಪೊಲೀಸರು ಜನರನ್ನು ಸಮಾಧಾನಪಡಿಸಿ ವಾಪಸ್ ಕಳುಹಿಸಿದರು. ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.