ETV Bharat / state

ಮಾಸ್ಕ್ ಧರಿಸದವರಿಗೆ ಬಿತ್ತು ದಂಡ: ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳಿಗೆ ನೋಟಿಸ್​​! - ಮಾಸ್ಕ್ ಧರಿಸದವರಿಗೆ ದಂಡ

ಇಂದು ಸಂಜೆ ನಗರದ ಗಡಿಯಾರ ಕಂಬದಿಂದ ಪ್ರಾರಂಭವಾದ ಮಾಸ್ಕ್ ಅಭಿಯಾನ ವಿಜಯಲಕ್ಷ್ಮಿ ರಸ್ತೆ, ಕಾಳಿಕಾದೇವಿ ರಸ್ತೆ, ಚೌಕಿಪೇಟೆ, ಚಾಮರಾಜಪೇಟೆ, ಎನ್.ಆರ್. ರಸ್ತೆ, ಕೆ.ಆರ್. ರಸ್ತೆ ಸೇರಿದಂತೆ ವಿವಿಧೆಡೆ ಸಂಚರಿಸಿ ಪಾದಚಾರಿಗಳು, ಬಟ್ಟೆ ಅಂಗಡಿಗಳು, ಕಿರಾಣಿ ಅಂಗಡಿಗಳು, ಜ್ಯೂವೆಲರಿ ಶಾಪ್‍ಗಳು, ಅಲ್ಲದೆ ಹೋಲ್‍ ಸೇಲ್ ಮತ್ತು ರೀಟೇಲ್ ಶಾಪ್‍ಗಳಿಗೂ ತೆರಳಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಯಿತು.

Davanagere
ಮಾಸ್ಕ್ ಧರಿಸದವರಿಗೆ ಬಿತ್ತು ದಂಡ: ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳಿಗೆ ನೋಟಿಸ್
author img

By

Published : Nov 3, 2020, 8:10 PM IST

ದಾವಣಗೆರೆ: ಕೊರೊನಾ ವೈರಸ್ ನಿಗ್ರಹಕ್ಕೆ ಪಣ ತೊಟ್ಟಿರುವ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮಾಸ್ಕ್ ಧರಿಸದವರಿಗೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಿದ್ದು, ಕೋವಿಡ್ ಮಾರ್ಗಸೂಚಿ ಪಾಲಿಸದವರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ.

ನಗರದ ವಿವಿಧ ಪ್ರದೇಶಗಳಿಗೆ ತೆರಳಿ, ಮಾಸ್ಕ್ ಹಾಕದವರಿಗೆ ಸ್ಥಳದಲ್ಲಿಯೇ ದಂಡ ಹಾಕಿಸಿದರಲ್ಲದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಡಿಸಿ ನೇತೃತ್ವದ ಅಧಿಕಾರಿಗಳ ತಂಡ ದಾವಣಗೆರೆ ನಗರದ ಪ್ರಮುಖ ಜನನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಮಾಸ್ಕ್ ಅಭಿಯಾನ ನಡೆಸಿತು. ಅಲ್ಲದೆ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಸಾರ್ವಜನಿಕರಿಗೆ ಬುದ್ಧಿವಾದ ಹೇಳಿದರು.

ಮಾಸ್ಕ್ ಧರಿಸದೆ ಸಂಚರಿಸುತ್ತಿದ್ದ ಕೆಲ ವಾಹನ ಸವಾರರನ್ನು ಕೂಡ ತಡೆದು, ದಂಡ ವಿಧಿಸಲಾಯಿತು. ಹಲವು ಅಂಗಡಿಗಳ ಒಳಗೆ ಪ್ರವೇಶಿಸಿದ ಡಿಸಿ ನೇತೃತ್ವದ ತಂಡ, ಅಂಗಡಿಗಳ ಮಾಲೀಕರು, ಕೆಲಸಗಾರರು ಮಾಸ್ಕ್ ಧರಿಸದೆ ವ್ಯಾಪಾರ ಚಟುವಟಿಕೆ ನಡೆಸುತ್ತಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಜೊತೆಗೆ ಇಂತಹವರಿಗೆ ಹೆಚ್ಚಿನ ದಂಡ ವಿಧಿಸುವುದು ಅಗತ್ಯವಾಗಿದೆ ಎಂದು ಎಚ್ಚರಿಕೆ ನೀಡಿದರು.

ನಗರದ ಕಾಳಿಕಾದೇವಿ ರಸ್ತೆಯಲ್ಲಿನ ಬಿ.ಎಸ್. ಚನ್ನಬಸಪ್ಪ ಬಟ್ಟೆ ಅಂಗಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮಳಿಗೆಯೊಳಗೆ ಸಾಮಾಜಿಕ ಅಂತರವಿಲ್ಲದೆ ಜನಜಂಗುಳಿ ಇರುವುದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಿಯಮಿತ ಸಂಖ್ಯೆಯಲ್ಲಿ ಗ್ರಾಹಕರಿಗೆ ಅಂಗಡಿಯೊಳಗೆ ಪ್ರವೇಶ ನೀಡಬೇಕು. ಸರದಿಯಂತೆ ಗ್ರಾಹಕರಿಗೆ ಅವಕಾಶ ನೀಡಬೇಕು ಎಂದು ನಿರ್ದೇಶನ ನೀಡಿದರು. ಗ್ರಾಹಕರಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ತೀವ್ರ ಜನಜಂಗುಳಿ ಇದ್ದು, ನಿಯಮಾನುಸಾರ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳಿಗೆ ನೋಟಿಸ್ ನೀಡಿ, ಸೂಕ್ತ ಕ್ರಮ ಜರುಗಿಸುವಂತೆ ನಗರಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಡಿಸಿ ನೇತೃತ್ವದ ಅಧಿಕಾರಿಗಳನ್ನೊಳಗೊಂಡ ತಂಡ ಮಾಸ್ಕ್ ಅಭಿಯಾನ ನಡೆಸಿದ್ದನ್ನು ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿದರೆ, ಮಾಸ್ಕ್ ಧರಿಸದವರು ದಂಡ ಪಾವತಿಯನ್ನು ತಪ್ಪಿಸಲು ಪಲಾಯನ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.